ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟು ಸ್ಫೊಟಿಸುವುದಾಗಿ ಬೆದರಿಕೆ ಹಾಕಿ ಕೆಲ ಕಾಲ ಆತಂಕ ಸೃಷ್ಟಿಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾವನ ಮೇಲಿನ ಸೇಡಿಗಾಗಿ ಏರ್ಪೋರ್ಟ್ಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಿದ್ದಾಗಿ ಆರೋಪಿ ಬಾಯ್ಬಿಟ್ಟಿದ್ದಾನೆ.
ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತಾನನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಈತ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ. ಇಂದು ಮುಂಜಾನೆ 3:30ರ ಸಮಯದಲ್ಲಿ ಪೊಲೀಸ್ ಕಂಟ್ರೋಲ್ ರೂಮ್ಗೆ ಕರೆ ಮಾಡಿದ್ದ ಈತ, ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದ. ಕೂಡಲೇ ಬೆದರಿಕೆ ಕರೆಯ ಜಾಡು ಹಿಡಿದು ಹೊರಟ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ತನ್ನ ಅಕ್ಕನಿಗೆ ವಿಚ್ಛೇದನ ನೀಡಿದ ಬಾವನ ವಿರುದ್ಧ ಸೇಡು ತೀರಿಸಿಕೊಳ್ಳು ಬೆದರಿಕೆ ಹಾಕಿದ್ದಾಗಿ ವಿಚಾರಣೆ ವೇಳೆ ಆರೋಪಿ ಬಾಯ್ಬಿಟ್ಟಿದ್ದಾನೆ.