ಶಂಕಿತನ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು : ಇಸಿಸ್ ಸೇರಿದಂತೆ ಇನ್ನಿತರ ಉಗ್ರ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿದ್ದ ಆರೋಪದಡಿ ಬಂಧಿತನಾಗಿದ್ದ ಶಂಕಿತನ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಯ ಅಧಿಕಾರಿಗಳು ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.

ಆರೋಪಿ ಉಗ್ರಗಾಮಿ ಶಿಹಾಬುದ್ದೀನ್ ವಿರುದ್ಧ ಭಾರತೀಯ ದಂಡ ಸಂಹಿತೆ, ಶಸ್ತ್ರಾಸ್ತ್ರ ಕಾಯ್ದೆ, ಕಾನೂನು ಬಾಹಿರ ಚಟುವಟಿಕೆಗಳ ಕಾಯ್ದೆ ಅಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಶಿಹಾಬುದ್ದೀನ್ ಭಯೋತ್ಪಾದನಾ ಚಟುವಟಿಕೆಯ ಪಿತೂರಿಯ ದೊಡ್ಡ ಭಾಗವಾಗಿದ್ದು, ಈ ಹಿನ್ನೆಲೆಯಲ್ಲಿ ಈತನ ವಿರುದ್ಧ ದೋಷಾರೋಪ‌ಣಾ ಪಟ್ಟಿ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಳೆದ ವರ್ಷ ಉಗ್ರಗಾಮಿ ಸಂಘಟನೆಯ ನಂಟಿದ್ದ ಬೆಂಗಳೂರು ಮೂಲದ ಮೆಹಬೂಬ್ ಪಾಷಾ ಮತ್ತು 16 ಜನರನ್ನು ದಕ್ಷಿಣ ಭಾರತದಲ್ಲಿ ಯುವ ಮುಸ್ಲಿಮರನ್ನು ಭಯೋತ್ಪಾದಕ ಸಂಘಟನೆಗಳಿಗೆ ಸೇರಿಸಿಕೊಳ್ಳುವ ನಿಟ್ಟಿನಲ್ಲಿ ತಂಡ ರಚನೆಯ ಆರೋಪದಲ್ಲಿ ಎನ್‌ಐಎ ಬಂಧಿಸಿತ್ತು‌.

ಈ ಪ್ರಕರಣದ ಭಾಗವಾಗಿ ಉಗ್ರಗಾಮಿ ಶಿಹಾಬುದ್ದೀನ್‌ನ ವಿರುದ್ಧ ಇದೀಗ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ಈ ತಂಡ ಬೆಂಗಳೂರನ್ನು ಕೇಂದ್ರ‌ವಾಗಿರಿಸಿಕೊಂಡು ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಹಲವಾರು ಕ್ರಿಮಿನಲ್ ಪಿತೂರಿ ಸಭೆಗಳನ್ನು ನಡೆಸಿದ್ದಾರೆ. ಹಾಗೆಯೇ ತಮಿಳುನಾಡಿನಲ್ಲಿ ಭಯೋತ್ಪಾದಕ ಕೃತ್ಯಗಳು, ಹಿಂದೂ ನಾಯಕರ ಹತ್ಯೆಗೆ ಸಂಬಂಧಿಸಿದಂತೆ ಹಲವು ಪ್ರಕರಣದಲ್ಲಿ ಭಾಗಿಯಾಗಿರುವ ಉಗ್ರ ಮೊಯ್ದೀನ್ ಎಂಬಾತನೊಂದಿಗೆ ಸೇರಿ ಈ ಎಲ್ಲಾ ಕೃತ್ಯಗಳ ಭಾಗವಾಗಿದ್ದು, ಈ ಹಿನ್ನೆಲೆಯಲ್ಲಿ ಶಿಹಾಬುದ್ದೀನ್ ವಿರುದ್ಧ ದೋಷಾರೋಪ‌ಣಾ ಪಟ್ಟಿ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.

Raksha Deshpande

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

2 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

2 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

3 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

3 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

3 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

3 hours ago