ಬೆಂಗಳೂರು

ಶಶಿಕಲಾಗೆ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಕರ್ಯ, ವರದಿ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ

ಬೆಂಗಳೂರು : ಮಾಜಿ ಸಿಎಂ ಜೆ ಜಯಲಲಿತಾರ ಸಹಾಯಕಿ ವಿಕೆ ಶಶಿಕಲಾಗೆ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಕರ್ಯ ಬಗ್ಗೆ ದಾಖಲಾದ ಎಫ್‌ಐಆರ್ ತನಿಖೆಯ ವರದಿಯನ್ನು ಸಲ್ಲಿಸಲು ಭ್ರಷ್ಟಾಚಾರ ನಿಗ್ರಹ ದಳಕ್ಕೆ(ಎಸಿಬಿ) ಕರ್ನಾಟಕ ಹೈಕೋರ್ಟ್ ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ.

ಎಸಿಬಿ ನಿಗದಿತ ಗಡುವಿನಲ್ಲಿ ತನಿಖೆಯ ವರದಿ ಸಲ್ಲಿಸುವಲ್ಲಿ ವಿಫಲವಾದರೆ. ಮುಂದಿನ ವಿಚಾರಣೆಯ ನಡೆಯುವ ಅಕ್ಟೋಬರ್ 8ರಂದು ಗೃಹ ಇಲಾಖೆಯ ಕಾರ್ಯದರ್ಶಿ ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ಹೈಕೋರ್ಟ್ ಹೇಳಿದೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ವಿಭಾಗೀಯ ಪೀಠವು ಚೆನ್ನೈನ ಅಲ್ವಾರ್‌ಪೇಟೆಯ ಸಾಮಾಜಿಕ ಕಾರ್ಯಕರ್ತೆ ಮತ್ತು ಶಿಕ್ಷಣ ತಜ್ಞೆ ಕೆಎಸ್ ಗೀತಾ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಈ ಆದೇಶ ನೀಡಿದೆ

2014ರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಿವಗಂತ ಜೆ ಜಯಲಲಿತಾ ಜೊತೆಗೆ ಸಹ ಆರೋಪಿ ಎನಿಸಿ, ನಂತರ ಆರೋಪ ಸಾಬೀತಾಗಿದ್ದರಿಂದ ಅಪರಾಧಿಯಾಗಿ ಶಶಿಕಲಾ ಅವರು ಶಶಿಕಲಾ ಅವರು 2017ರ ಫೆಬ್ರುವರಿ 15ರಂದು ಪೊಲೀಸರಿಗೆ ಶರಣಾಗಿದ್ದರು. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಾಲ್ಕು ವರ್ಷಗಳ ಕಾಲ ಶಿಕ್ಷೆ ಅನುಭವಿಸಿದ್ದರು.

Raksha Deshpande

Recent Posts

ಜೊಮ್ಯಾಟೊದಲ್ಲಿ ಆರ್ಡರ್‌ : ಪನೀರ್‌ ಬಿರಿಯಾನಿಯಲ್ಲಿ ಚಿಕನ್‌ ಪೀಸ್‌

ಜೊಮ್ಯಾಟೊದಿಂದ ಆರ್ಡರ್‌ ಮಾಡಿದ ಪನೀರ್‌ ಬಿರಿಯಾನಿಯಲ್ಲಿ ಚಿಕನ್‌ ಪೀಸ್‌ ಸಿಕ್ಕಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

6 mins ago

ಅಂಜಲಿ‌ ಕೊಲೆಗೆ ಪೊಲೀಸರೇ ಹೊಣೆ : ದಿಂಗಾಲೇಶ್ವರ ಸ್ವಾಮೀಜಿ ಆರೋಪ

ಅಂಜಲಿ ಕೊಲೆಗೆ ಪೊಲೀಸರೆ ಹೊಣೆ ಅವರ ನಿರ್ಲಕ್ಷ್ಯದಿಂದ ಈ ದುರ್ಘಟನೆ ನಡೆದಿದೆ ಎಂದು ದಿಂಗಾಲೇಶ್ವರ ಸ್ವಾಮೀಜಿ ಕಿಡಿ ಕಾರಿದ್ದಾರೆ. ಅಂಜಲಿ…

11 mins ago

ಗೆಲ್ಲುತ್ತೀ ಎಂದು ಪಂಜುರ್ಲಿ ದೈವ ಹೇಳಿದೆ, ಹಿಂದೆ ಸರಿಯೊಲ್ಲ: ರಘುಪತಿ ಭಟ್

ಮೂರು ಬಾರಿ ಶಾಸಕನಾಗಿದ್ದ ತಮಗೆ ಪಕ್ಷದಲ್ಲಿ ಸಿಗಬೇಕಾಗಿದ್ದ ಮನ್ನಣೆ ಗೌರವ ಸಿಕ್ತಿಲ್ಲ. ಆದ್ದರಿಂದ ತಾನು ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ…

20 mins ago

ಕಾರಿನಲ್ಲಿ ಮಗು ಮರೆತು ಮದ್ವೆಗೆ ಹೋದ ದಂಪತಿ : ನರಳಿ ಪ್ರಾಣ ಬಿಟ್ಟ ಕಂದಮ್ಮ

ನಗರದ ಕೋಟದಲ್ಲಿ ಕಾರಿನಲ್ಲೇ ಮಗುವನ್ನು ಮರೆತು ದಂಪತಿ ಮದುವೆಗೆ ತೆರಳಿದ್ದು ಮಗು ನರಳಿ ನರಳಿ ಕಾರಿನಲ್ಲೆ ಪ್ರಾಣ ಬಿಟ್ಟಿರುವ ದಾರುಣ…

29 mins ago

ʼಸಮಸ್ಯೆ ಬಗೆಹರಿಸಿ ಇಲ್ಲ ಒಂದು ತೊಟ್ಟು ವಿಷ ಕೊಡಿʼ ಎಂದ ಗ್ರಾಮಸ್ಥರು

ಕಳೆದ 20 ವರ್ಷಗಳಿಂದ ಮೂಲಭೂತ ಸೌಕರ್ಯಗಳಿಲ್ಲದೆ ಪರದಾಡುತ್ತಿದ್ದಾರೆ. ಮಳೆ ಬಂದರೆ ಮನೆಗಳಿಗೆ ನೀರು ನುಗ್ಗುತ್ತದೆ. ಕೊಳಚೆ ನೀರು ರಸ್ತೆಯಲ್ಲಿಯೇ ಹರಿಯುತ್ತಿದ್ದು,…

30 mins ago

ಮೃತಪಟ್ಟ ನವಜಾತ ಶಿಶುವನ್ನು ಚರಂಡಿಗೆ ಎಸೆತ

ಮಹಿಳೆಯೊಬ್ಬಳು ಮೃತಪಟ್ಟ ನವಜಾತ ಶಿಶುವನ್ನು ಚರಂಡಿಗೆ ಎಸೆದು ಹೋಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಲಕೊಪ್ಪರ ಗ್ರಾಮದಲ್ಲಿ ನಡೆದಿದೆ.

44 mins ago