News Karnataka Kannada
Monday, May 06 2024
ಬೆಂಗಳೂರು

ಶಾಲಾ-ಕಾಲೇಜುಗಳಲ್ಲಿ ಸೋಂಕಿನ ಹೆಚ್ಚಳ ಹಿನ್ನೆಲೆ ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

Basavaraj Bommai
Photo Credit :

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕಿನ  ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ.

ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಶಿಕ್ಷಣ ಹಾಗೂ ಆರೋಗ್ಯ ಇಲಾಖೆಯ ತಜ್ಞರು ಪಾಲ್ಗೊಳ್ಳಲಿದ್ದಾರೆ. ಶಾಲೆಗಳ ಕುರಿತು ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಯನ್ನು ಬದಲಾದ ಪರಿಸ್ಥಿತಿಗೆ ತಕ್ಕಂತೆ ಪರಿಷ್ಕರಣೆಮಾಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಬುಧವಾರ ಕೋವಿಡ್ ಪರಿಸ್ಥಿತಿ ಅವಲೋಕನ ಸಂಬಂಧ ಸಿಎಂ ಬೊಮ್ಮಾಯಿ ಅವರು ಮುಖ್ಯ ಕಾರ್ಯದರ್ಶಿ ಸೇರಿದಂತೆ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸಭೆಯ ಬಳಿಕ ಮಾತನಾಡಿದ ಅವರು, ಕೋವಿಡ್ ನಿರ್ವಹಣೆ ಹಾಗೂ ಮಾರ್ಗಸೂಚಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಆ ಬಳಿಕ ತೀರ್ಮಾಣ ಪ್ರಕಟಿಸಲಾಗುವುದು. ರಾಜ್ಯದ ನಾನಾ ಜಿಲ್ಲೆಗಳ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ ಎಂದು ತಿಳಿಸಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು