ಬೆಂಗಳೂರು : ಕೊರೋನಾ ಸೋಂಕಿನ ( Corona Virus ) ಭೀತಿಯ ನಡುವೆಯೂ ರಾಜ್ಯದಲ್ಲಿ 6 ರಿಂದ 12 ನೇ ತರಗತಿ ಆರಂಭಗೊಳಿಸಲಾಗಿದೆ . ಇದೀಗ ಅಕ್ಟೋಬರ್ 25 ರಿಂದ ಬಾಕಿ ಉಳಿದಂತ 1 ರಿಂದ 5 ನೇ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಇದರ ನಡುವೆ ಶಾಲಾ ಮಕ್ಕಳಿಗೆ ಕೊರೋನಾ ಲಸಿಕೆಯನ್ನು ಶಾಲೆಗಳಲ್ಲಿಯೇ ನೀಡಲಾಗುತ್ತದೆ ಎಂಬುದಾಗಿ ಶಿಕ್ಷಣ ಸಚಿವ ಬಿ . ಸಿ . ನಾಗೇಶ್ ಹೇಳಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿನಾಗೇಶ್ ಅವರು, ರಾಜ್ಯದಲ್ಲಿ ಎಲ್ಲಾ ಶಾಲೆಗಳು ಆರಂಭಗೊಂಡ ನಂತ್ರ ಮಧ್ಯಾಹ್ನದ ಬಿಸಿಯೂಟ ಯೋಜನೆ ಕೂಡ ಪುನರಾರಂಭಿಸಲಾಗುತ್ತದೆ. ಶಾಲೆ ಆರಂಭದ ವೇಳೆಗೆ ಮಕ್ಕಳಿಗೆ ಕೊರೋನಾ ಲಸಿಕೆ ದೊರೆತರೇ, ಶಾಲೆಗಳಲ್ಲಿಯೇ ಮಕ್ಕಳಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತದೆ ಎಂದು ತಿಳಿಸಿದರು. ಈ ಮೂಲಕ ಶಾಲಾ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ನೀಡಿದರು.
ಆಕ್ಟೋಬರ್ 25ರಿಂದ 1ರಿಂದ 5ರ ತನಕ ಶಾಲೆ ಶುರು ಮಾಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಶಾಲೆ ಆರಂಭಕ್ಕೆ ಕೋವಿಡ್ ತಾಂತ್ರಿಕ ಸಮಿತಿ ಒಪ್ಪಿಗೆ ನೀಡಲಾಗಿದೆ. ಕರ್ನಾಟಕದಲ್ಲಿ ಈಗಾಗಲೇ 6 ನೇ ತರಗತಿಯಿಂದ ಉನ್ನತ ಶಿಕ್ಷಣ ಹಂತದವರೆಗಿನ ಎಲ್ಲ ತರಗತಿಗಳ ಭೌತಿಕ ಕ್ಲಾಸ್ ಅನುಮತಿ ನೀಡಿದೆ. ಕೊರೊನಾ ಮೂರನೇ ಅಲೆಯ ಭಯದ ಹಿನ್ನೆಲೆಯಿಂದ 1 ರಿಂದ 5 ನೇ ತರಗತಿ ಆರಂಭವಾಗಿರಲಿಲ್ಲ, ಇದಲ್ಲದೇ ಮಕ್ಕಳಿಗೆ ಕರೋನ ಸೊಂಕಿಗೆ ಲಸಿಕೆ ಬಂದಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮತ್ತೆ ಶಾಲೆಗಳನ್ನು ಪುನರ್ ಆರಂಭ ಮಾಡಲು ಮುಂದಾಗಿದೆ.