ಶಾಸಕ ಜಮೀರ್, ರೋಷನ್ ಬೇಗ್‌ ಮನೆ ಮೇಲಿನ ಇಡಿ ಅಧಿಕಾರಿಗಳ ಶೋಧ ಮುಕ್ತಾಯ

ಬೆಂಗಳೂರು: ಗುರುವಾರ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ಶಾಸಕ ಜಮೀರ್ ಅಹ್ಮದ್ ಖಾನ್ ಮತ್ತು ಮಾಜಿ ಸಚಿವ ರೋಷನ್‌ ಬೇಗ್‌ ಮನೆ ಮೇಲೆ ದಾಳಿ ನಡೆಸಿದ್ದು ಇಂದು ಬೆಳಗಿನ ಜಾವ ಶೋಧ ಕಾರ್ಯ ಮುಕ್ತಾಯಗೊಂಡಿದೆ.

ಸತತ 23 ಗಂಟೆಗಳ ಕಾಲ ದಾಖಲೆಗಳ ಹುಡುಕಾಟ, ವಿಚಾರಣೆ ನಡೆಸಿ ಬೆಳಗಿನ ಜಾವ ಅಧಿಕಾರಿಗಳ ವಾಪಸ್ ಹೋಗಿದೆ. ಕೆಲ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.

ಈ ಸಂಬಂಧ ಪ್ರತಿಕ್ರಿಯಿಸಿದ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ‘ಐಎಂಎ ಹಗರಣದ ಬಗ್ಗೆ ಯಾವುದೇ ಪ್ರಶ್ನೆ ಅಥವಾ ಮಾಹಿತಿಯನ್ನೂ ಅವರು ಕೇಳಲಿಲ್ಲ. ಮುಂದಿನ ದಿನಗಳಲ್ಲಿ ಕರೆದಾಗ ಕಚೇರಿಗೆ ಬಂದು ಸ್ಪಷ್ಟನೆ ನೀಡಬೇಕು ಎಂದು ತಿಳಿಸಿದ್ದಾರೆ. ಆದರೆ, ಯಾವುದೇ ನೋಟಿಸ್ ನೀಡಿಲ್ಲ. ಯಾರನ್ನೂ ವಶಕ್ಕೆ ಪಡೆದಿಲ್ಲ’ ಎಂದು ಸ್ಪಷ್ಟಪಡಿಸಿದರು.

‘ದೊಡ್ಡ ಮನೆ ನಿರ್ಮಾಣ ಮಾಡಿರುವುದು ರಾಜಕೀಯ ವಿರೋಧಿಗಳ ಕಣ್ಣು ಕುಕ್ಕಿತ್ತು. ದೂರು ನೀಡಿದವರು ಯಾರು ಎಂದು ಹೇಳಲು ಇ.ಡಿ ಅಧಿಕಾರಿಗಳು ನಿರಾಕರಿಸಿದರು. ಇ.ಡಿ ಅಧಿಕಾರಿಗಳು ಶೋಧ ನಡೆಸಿ ಯಾವುದೇ ತಪ್ಪುಗಳಿಲ್ಲ ಎಂದು ಮನವರಿಕೆ ಮಾಡಿಕೊಂಡು ಹೋಗಿರುವುದು ನಮಗೂ ನಿರಾಳ ಆಗಿದೆ’ ಎಂದರು.

ದಾಳಿ ಬಗ್ಗೆ ಪ್ರತಿಕ್ರಿಯಿಸಿದ ರೋಷನ್ ಬೇಗ್‌, ‘ಅಕ್ರಮ ಹಣಕಾಸು ವ್ಯವಹಾರ(ಮನಿ ಲಾಂಡ್ರಿಂಗ್) ನಡೆದಿದೆಯೇ ಎಂಬುದರ ಬಗ್ಗೆ ಇ.ಡಿ ಅಧಿಕಾರಿಗಳು ಶೋಧ ನಡೆಸಿದರು. ಎರಡು–ಮೂರು ಗಂಟೆಗಳಲ್ಲೇ ನಡೆಯಬೇಕಿದ್ದ ಶೋಧವನ್ನು ಅನಗತ್ಯವಾಗಿ ವಿಳಂಬ ಮಾಡಿದರು ಎಂದರು

Sampriya YK

Recent Posts

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

10 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

26 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

30 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

52 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

1 hour ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

1 hour ago