ಬೆಂಗಳೂರು : ಶಿಕ್ಷಕರ ದಿನಾಚರಣೆಯಂದು ರಾಜ್ಯದ ಶಿಕ್ಷಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಈ ವರ್ಷದೊಳಗೆ 5 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಶಿಕ್ಷಕರ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ , 5 ಸಾವಿರ ಶಿಕ್ಷಕರ ನೇಮಕಕ್ಕೆ ಇಂದು ತೀರ್ಮಾನಿಸಲಾಗಿದ್ದು, ಅದರಂತೆ ಈ ವರ್ಷದೊಳಗೆ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದರು