ರಾಜ್ಯದ ಎಲ್ಲಾ ಸಕ್ಕರೆ ಕಾರ್ಖಾನೆಗಳ ವ್ಯವಸ್ಥಾಪಕ ನಿರ್ದೇಶಕರು/ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ನಿನ್ನೆ ಸಭೆ ನಡೆಸಿದರು.
7 ಸಕ್ಕರೆ ಕಾರ್ಖಾನೆಗಳು ರೈತರಿಗೆ ಒಟ್ಟು 42 ಕೋಟಿ ಹಣ ಪಾವತಿಸುವುದನ್ನು ಬಾಕಿ ಉಳಿಸಿಕೊಂಡಿದ್ದು, 2 ದಿನದೊಳಗೆ ರೈತರಿಗೆ ಬಾಕಿ ಪಾವತಿಸುವಂತೆ ಶಂಕರ ಪಾಟೀಲ ಮುನೇನಕೊಪ್ಪ ಖಡಕ್ ಸೂಚನೆ ಕೊಟ್ಟಿದ್ದಾರೆ.
ಬಾಕಿ ಉಳಿಸಿಕೊಂಡಿರುವ ಕಾರ್ಖಾನೆಗಳು ಆಕ್ಟೋಬರ್ 03 ರೊಳಗೆ ಹಣ ಪಾವತಿ ಮಾಡುವಂತೆ ಸೂಚನೆ ನೀಡಲಾಗಿದೆ. ಈಗಾಗಲೇ ಬಸವೇಶ್ವರ ಶುಗರ್ಸ್ ಹಾಗೂ ಕೋರ್ ಗ್ರೀನ್ ಶುಗರ್ಸ್ ಕಾರ್ಖಾನೆಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ವಸೂಲಾತಿಗೆ ನೊಟೀಸ್ ಜಾರಿಗೊಳಿಸಲಾಗಿದೆ. ಉಳಿದ ಕಾರ್ಖಾನೆಗಳು ಇನ್ನೆರಡು ದಿನಗಳಲ್ಲಿ ರೈತರಿಗೆ ಹಣ ಪಾವತಿಸದಿದ್ದರೆ ಜಿಲ್ಲಾಧಿಕಾರಿಗಳ ಮೂಲಕ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ಎಚ್ಚರಿಕೆ ನೀಡಿದರು.