ಸದನದಲ್ಲಿ ಗದ್ದಲ ಎಬ್ಬಿಸಿದ ರೋಹಿಣಿ ಸಿಂಧೂರಿ ಪ್ರಕರಣ

ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸದನದಲ್ಲಿ ಹಕ್ಕುಚ್ಯುತಿ ಪ್ರಸ್ತಾವನೆ ಮಂಡಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಜೆಡಿಎಸ್‌ನ ಸದಸ್ಯರು ಸದನದಲ್ಲಿ ಕೆಲಕಾಲ ಧರಣಿ ನಡೆಸಿದರು.

ಶಾಸಕ ಸಾ.ರಾ.ಮಹೇಶ್‌ ಹಕ್ಕುಚ್ಯುತಿ ಪ್ರಸ್ತಾವನೆಗೆ ಅವಕಾಶ ನೀಡದಿದ್ದರೆ ರಾಜೀನಾಮೆ ನೀಡುವುದಾಗಿ ಹೇಳಿದರು. ಬುಧವಾರ ಶೂನ್ಯವೇಳೆ ಬಳಿಕ ವಿಷಯ ಪ್ರಸ್ತಾಪಿಸಿದ ಸಾ.ರಾ.ಮಹೇಶ್‌, ಬ್ಯಾಗ್‌ ಖರೀದಿ ಸೇರಿದಂತೆ ಮೈಸೂರಿನ ಹಿಂದಿನ ಜಿಲ್ಲಾಧಿಕಾರಿಗಳು ದೊಡ್ಡಮಟ್ಟದಲ್ಲಿ ಹಣ ದುರುಪಯೋಗ ಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟವನ್ನುಂಟು ಮಾಡಿದ್ದಾರೆ ಎಂದು ಹೇಳಿದರು .

ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗುರುವಾರ ಅಥವಾ ಶುಕ್ರವಾರ ಚರ್ಚೆಗೆ ಅವಕಾಶ ನೀಡುವುದಾಗಿ ಹೇಳಿದರು.

ಇದಕ್ಕೆ ಒಪ್ಪದ ಮಹೇಶ್‌ ಬಾವಿಗಿಳಿದು ಧರಣಿ ಆರಂಭಿಸಿದರು. ಅವಕಾಶ ನೀಡುವುದಾಗಿ ಹೇಳಿದ್ದರೂ ಜೆಡಿಎಸ್‌ ಸದಸ್ಯರು ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಸ್ಪೀಕರ್‌ ಹೇಳಿದ ಬಳಿಕ ಧರಣಿ ಕೈಬಿಟ್ಟರು.

Raksha Deshpande

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

18 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

32 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

45 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

1 hour ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

1 hour ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

1 hour ago