News Karnataka Kannada
Monday, April 29 2024
ಬೆಂಗಳೂರು

ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಸಿಹಿಸುದ್ದಿ

Untitled 176
Photo Credit :

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾಗಿದ್ದು, ಪಡಿತರ ವ್ಯವಸ್ಥೆಯಡಿ ಅಕ್ಕಿ ಜೊತೆ ಸಿರಿಧಾನ್ಯ, ಜೋಳ ಮತ್ತು ರಾಗಿಯನ್ನು ಸಮಪ್ರಮಾಣದಲ್ಲಿ ವಿತರಿಸಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

ಪಡಿತರ ಚೀಟಿದಾರರಿಗೆ ಅಕ್ಕಿಯ ಜೊತೆಗೆ ರಾಗಿ,ಜೋಳ ಮತ್ತು ಸಿರಿಧಾನ್ಯಗಳನ್ನು ಸಮಪ್ರಮಾಣದಲ್ಲಿ ನೀಡಲು ತಜ್ಞರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ ಎನ್ನಲಾಗಿದ್ದು, ರಾಜ್ಯ ಸರ್ಕಾರ ಪಡಿತರ ಚೀಟಿದಾರರಿಗೆ ಅಕ್ಕಿ, ಗೋಧಿ ಅಥವಾ ರಾಗಿ ನೀಡುತ್ತಿದೆ. ಪ್ರಧಾನಮಂತ್ರಿಗಳ ಗರೀಬ್ ಕಲ್ಯಾಣ್ ಯೋಜನೆಯಡಿ 5 ಕೆಜಿ ಅಕ್ಕಿಯನ್ನೂ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಕ್ಕಿಯ ಜೊತೆಗೆ ರಾಗಿ, ಜೋಳ ಮತ್ತು ಸಿರಿಧಾನ್ಯಗಳನ್ನು ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಮೈಸೂರು ಭಾಗದಲ್ಲಿ ಅಕ್ಕಿಯ ಜೊತೆಗೆ ರಾಗಿ, ಸಜ್ಜೆ, ನವಣೆ ಸೇರಿದಂತೆ ಸಿರಿಧಾನ್ಯಗಳನ್ನು ನೀಡುವುದು ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಅಕ್ಕಿ, ಗೋಧಿ ಜೊತೆಗೆ ಜೋಳ ಒದಗಿಸಲು ತಜ್ಞರು ವರದಿ ನೀಡಿದ್ದು, ಈ ವರದಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು