ಬೆಂಗಳೂರು

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು : ತಮ್ಮ ಸೇವಾವಧಿಯಲ್ಲಿ ಸರ್ಕಾರಿ ನೌಕರರು ಚರಾಸ್ತಿ ಮತ್ತು ಸ್ಥಿರಾಸ್ತಿ ಖರೀದಿಸುವ ಮೊದಲು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯಬೇಕು ಎಂಬ ನಿರ್ಬಂಧ ಸಡಿಲಿಸಲಾಗಿದೆ. ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಕಾಲಮಿತಿಯೊಳಗೆ ಸಂಬಂಧಿಸಿದ ಪ್ರಾಧಿಕಾರಕ್ಕೆ ವರದಿ ಮಾಡಲು ಅವಕಾಶ ಕಲ್ಪಿಸುವುದು ಸೇರಿದಂತೆ ಹಲವು ಬೇಡಿಕೆಗಳಿಗೆ ಸಕಾರಾತ್ಮಕ ಸ್ಪಂದನೆ ದೊರೆತಿದೆ.

ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಮಿತಾ ಪ್ರಸಾದ್ ಅಧ್ಯಕ್ಷತೆಯಲ್ಲಿ ಡಿಪಿಎಆರ್ ಕಾರ್ಯದರ್ಶಿ ಮನೀಶ್ ಮೌದ್ಗಿಲ್ ಮತ್ತು ಸದಸ್ಯ ಕಾರ್ಯದರ್ಶಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹಾಗೂ ವಿವಿಧ ಇಲಾಖೆಗಳ ಸದಸ್ಯರ ಸಮ್ಮುಖದಲ್ಲಿ ಗುರುವಾರ ರಾಜ್ಯಮಟ್ಟದ ಜಂಟಿ ಸಮಾಲೋಚನಾ ಸಮಿತಿ ನಡೆಸಲಾಗಿದ್ದು, ಕೆಲವು ಪ್ರಮುಖ ನಿರ್ಧಾರ ಕೈಗೊಳ್ಳಲಾಗಿದೆ.

ಸರ್ಕಾರಿ ನೌಕರರಿಗೆ ನಗದು ರಹಿತ ಚಿಕಿತ್ಸಾ ಸೌಲಭ್ಯವನ್ನು ಒದಗಿಸುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ತೀರ್ಮಾನಿಸಲಾಗಿದೆ. ಪ್ರತಿ ತಿಂಗಳು ವೇತನ, ಭತ್ಯೆ ಸಕಾಲದಲ್ಲಿ ಪಾವತಿಯಾಗುವಂತೆ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ.

ಶಿಕ್ಷಣ ಇಲಾಖೆಯ ಸಮಗ್ರ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಪರಿಶೀಲನೆ ಹಂತದಲ್ಲಿದ್ದು, ಶೀಘ್ರವಾಗಿ ಅಂತಿಮಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಕೆಜಿಐಡಿ ವಿಮೆ ಪಾಲಿಸಿಗಳ ಮೆಚುರಿಟಿ ಅವಧಿ 55 ವರ್ಷವಿದ್ದು, ಅದನ್ನು 60 ವರ್ಷದವರೆಗೆ ವಿಸ್ತರಿಸಿ ವಿಮೆ ಸೌಲಭ್ಯ ಕಲ್ಪಿಸಲಾಗುತ್ತದೆ.

ಅದೇ ರೀತಿ ಜಿಪಿಎಫ್, ಉಳಿತಾಯ ಖಾತೆಗಳಿಂದ ಮುಂಗಡ ಮತ್ತು ಭಾಗಶಃ ವಾಪಸಾತಿ ಪಡೆಯುವ ಸಂದರ್ಭದಲ್ಲಿ ನಿಯಮಗಳನ್ನು ಸಡಿಲಿಕೆ ಮಾಡಲಾಗುವುದು. ಆರು ತಿಂಗಳಿಗೆ ಒಂದು ಸಲ ಮುಂಬಡ್ತಿ ಕೋಟಾದ ಹುದ್ದೆಗಳನ್ನು ಗುರುತಿಸಿ ಪದೋನ್ನತಿ ನೀಡುವುದು ಸೇರಿದಂತೆ ಹಲವು ತೀರ್ಮಾನ ಕೈಗೊಳ್ಳಲಾಗಿದೆ.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

5 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

5 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

6 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

6 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

6 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

7 hours ago