ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಕ್ಕೆ ಮುಂದಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://kea.kar.nic.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೋದು.
ಹುದ್ದೆಯ ಹೆಸರು : ಸಹಾಯಕ ಪ್ರಾಧ್ಯಾಪಕ
ಒಟ್ಟು ಹುದ್ದೆಗಳ ಸಂಖ್ಯೆ: 1242
ವಿದ್ಯಾರ್ಹತೆ : ಅಭ್ಯರ್ಥಿಗಳು ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ್ದು, ಎನ್ಇಟಿ, ಕೆಎಸ್ಇಟಿ ಹಾಗೂ ಪಿಎಚ್ಡಿ ಮುಗಿಸಿರಬೇಕು.
ವಯೋಮಿತಿ: ಕನಿಷ್ಠ 22 ವರ್ಷ ಹಾಗೂ ಗರಿಷ್ಠ 40 ವರ್ಷ. 2ಎ, 2ಬಿ, ಹಾಗೂ 3ಎ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ/ ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಇತರ ಪ್ರವರ್ಗಗಳಿಗೆ 2,000 ರೂಪಾಯಿ, ಎಸ್ಸಿ/ ಎಸ್ಟಿ ಹಾಗೂ ಪ್ರವರ್ಗ -1 ರ ಅಭ್ಯರ್ಥಿಗಳಿಗೆ 1000 ರೂಪಾಯಿ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 31, 2021
ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ಸೈಟ್ https://kea.kar.nic.in ಗೆ ಭೇಟಿ ನೀಡಿ