News Karnataka Kannada
Sunday, April 28 2024
ಬೆಂಗಳೂರು

ಸರ್ಕಾರಿ ಮಾರ್ಗಸೂಚಿ ಅನ್ವಯ ಗಣೇಶ ಹಬ್ಬ

Chothi
Photo Credit :

ಸರ್ಕಾರಿ ಹೊಸ ಮಾರ್ಗಸೂಚಿಯ ಅನ್ವಯ ಈ‌ ಬಾರಿ ಚೌತಿ ಹಬ್ಬವು ಸಾದಾರಣವಾಗಿ ರಾಜ್ಯದೆಲ್ಲೆಡೆ ಆಚರಣೆ ಮಾಡಲಾಗುತ್ತಿದೆ. ಒಂದು ವಾರ್ಡ್ ಗೆ ಕೇವಲ ಒಂದೇ ಗಣಪತಿಯ ಮೂರ್ತಿಯನ್ನು ಇಡುವಂತೆ ಸರ್ಕಾರವು ಮಾರ್ಗ ಸೂಚಿ ಹೊರಡಿಸಿತ್ತು ಅದೇ ಮಾರ್ಗ ಸೂಚಿ ಅನ್ವಯ ಈ ಬಾರಿ ಹೆಚ್ಚಿನ ಜನಗಳನ್ನು ಸೇರಿಸದೆ. ಸಣ್ಣ ಪೆಂಡಾಲ್ ಅಡಿಯಲ್ಲಿ ಸಣ್ಣ ಗಣೇಶನ ಮೂರ್ತಿಯನ್ನು ಇಟ್ಟು ಹಬ್ಬವನ್ನು ಆಚರಿಸಲಾಗುತ್ತಿದೆ.

ಹಬ್ಬದ ಹಿನ್ನಲೆ

ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬು ಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.
ಶಿವಪುರಾಣದಲ್ಲಿ ಹೇಳಿರುವಂತೆ ಗಣಪತಿಯನ್ನು ತುಳಸೀ ದಳದಲ್ಲಿ ಪೂಜಿಸಬಾರದು. ಏಕೆಂದರೆ ತುಳಸಿಯ ದರ್ಶನ ಮತ್ತು ಗಂಧಗಳು ಗಣೇಶ ದೇವರಿಗೆ ಸಂಬಂಧಪಟ್ಟ ಒಳಕೇಂದ್ರಗಳನ್ನು ಮುಚ್ಚುತ್ತವೆ. ಕೇತಕೀ ಪುಷ್ಪದ ಸ್ಪರ್ಶವು ಶಿವನ ದರ್ಶನಕ್ಕೆ ಸಂಬಂಧಪಟ್ಟ ಕೇಂದ್ರಗಳ ಪ್ರಭಾವವನ್ನು ಕಡಿಮೆ ಮಾಡುತ್ತದೆ. ಹಾಗೆಯೇ ಚೌತಿಯ ಚಂದ್ರನ ದರ್ಶನವೂ ಗಣೇಶನ ಉಪಾಸನೆಗೆ ಪ್ರತಿಬಂಧಕವಾಗಿದೆ.
ಸೂರ್ಯನು ಬುದ್ಧಿತತ್ವಕ್ಕೆ ಮತ್ತು ಚಂದ್ರನು ಮನಸ್ತತ್ವಕ್ಕೆ ದೇವತೆ. ಗಣೇಶನ ಆಳ್ವಿಕೆಗೆ ಒಳಪಟ್ಟಿರುವ ಇಪ್ಪತ್ತೊಂದು ತತ್ವಗಳಲ್ಲಿ ಕೊನೆಯದು ಮನಸ್ಸು. ಉಳಿದ ಇಪ್ಪತ್ತು ತತ್ವಗಳಾವುವೆಂದರೆ, ಪಂಚಭೂತಗಳು, ಪಂಚ ಕರ್ಮೇಂದ್ರಿಯಗಳು, ಪಂಚ ಜ್ಞಾನೇಂದ್ರಿಯಗಳು ಮತ್ತು ಪಂಚತನ್ಮಾತ್ರೆಗಳು. ಮನಸ್ಸನ್ನು ಸಂಯಮದಿಂದ ಒಳಗಿನ ಜ್ಞಾನಾಕಾಶದಲ್ಲಿ ಲಯಗೊಳಿಸಿದರೆ ಗಣೇಶನ ಮಹಿಮೆಯ ಅನುಭವ ಉಂಟಾಗುತ್ತದೆ.
ಗಣೇಶ ಚತುರ್ಥಿಯ ರಾತ್ರಿ ಇಂತಹ ಸಂಯಮದಲ್ಲಿದ್ದು ಭಗವಂತನ ನಿಜಸ್ವರೂಪವನ್ನು ಅನುಭವಿಸುತ್ತಾ ಆನಂದವಾಗಿರಬೇಕು. ಹಾಗೆ ಮಾಡದೇ ಅದನ್ನು ಹೊರಗಿನ ಆಕಾಶದಲ್ಲಿ ಕಾಣುವ ಚಂದ್ರರೂಪದಲ್ಲಿ ನೋಡುವುದರಲ್ಲಿ ಆಸಕ್ತಿ ಹೊಂದಿದರೆ, ಗಣೇಶನ ಮಹಿಮೆಯ ಅರಿವು ಉಂಟಾಗದೇ ಅವನ ರೂಪವನ್ನು ಹಾಸ್ಯಮಾಡುವ ದುರ್ಬುದ್ದಿ ಉಂಟಾಗುತ್ತದೆ.

ನಮ್ಮ ದೇಶದಲ್ಲಿ ಗಣಪತಿಯ ಪೂಜೆಯು ಅನಾದಿ ಕಾಲದಿಂದಲೂ ನಡೆದು ಬಂದಿದೆ. ಆನೆಗಳ ಹಿಂಡು ಹೊಲ ಗದ್ದೆಗಳಿಗೆ ನುಗ್ಗಿ ಬೆಳೆಯನ್ನು ಹಾಳು ಮಾಡುವುದನ್ನು ತಡೆಯುವ ಸಲುವಾಗಿ ರೈತಾಪಿ ಜನಗಳು ಆನೆಯ ಮುಖವುಳ್ಳ ದೇವನನ್ನು ಪೂಜಿಸಿದರೆ, ಗೋದಾಮುಗಳಲ್ಲಿ ಧಾನ್ಯಗಳನ್ನು ತಿಂದು ಹಾಳು ಮಾಡುವ ಇಲಿಗಳನ್ನೂ ಪೂಜಿಸಿ ಇಬ್ಬರನ್ನೂ ಸಮಾಧಾನಿಸುವುದೂ ಹಬ್ಬದ ಒಂದು ಕಾರಣವೆಂದು ಕೆಲವರು ಹೇಳುವರು.
ಅದಲ್ಲದೇ ಹೊಲಗಳಲ್ಲಿ ನಿಲ್ಲಿಸುವ ಬೆರ್ಚಪ್ಪನಿಗೂ ಗಣಪತಿಯಂತೆ ಡೊಳ್ಳು ಹೊಟ್ಟೆಯನ್ನು ಮಾಡಿರುತ್ತಾರೆ. ಇದಲ್ಲದೇ ಗಣಪತಿಯನ್ನು ಬರ್ಮಾ, ಮಲೇಶಿಯಾ, ಇಂಡೋನೇಶಿಯಾ, ಚೀನಾ, ಸುಮಾತ್ರಾ, ಜಾವಾ, ಜಾಪಾನ್ ಮತ್ತಿತರ ದೇಶಗಳಲ್ಲಿಯೂ ಪೂಜಿಸುತ್ತಿದ್ದರು. ವಿಜ್ಞಾನಿಗಳ ಸೃಷ್ಟಿಯ ವಿಕಾಸಕ್ಕೂ ನಮ್ಮ ಪುರಾಣಗಳಲ್ಲಿ ಹೇಳುವ ದಶಾವತಾರ ಕಥೆಗಳಿಗೂ ಹೋಲಿಕೆಯುಂಟು.
ಮೊದಲಿಗೆ ನೀರಿನಲ್ಲಿರುವ ಅವತಾರಗಳಾದರೆ, ನಂತರ ಅರ್ಧ ಪ್ರಾಣಿ ಅರ್ಧ ಮನುಷ್ಯ. ಇದರಲ್ಲಿ ಗಣಪತಿಯೂ ಒಂದಾಗಿದೆ. ಗ್ರೀಕರ ಕಲ್ಪನೆಯಲ್ಲಿಯೂ ಇಂತಹ ಉದಾಹರಣೆಗಳಿವೆ.ಗಣಪತಿಯ ಮೂರ್ತಿಯ ಪೂಜೆಗೆ ಮೊದಲು ಸಗಣಿಯಿಂದ ಮಾಡಿ ಅದರ ಮೇಲೆ ಗರಿಕೆಯನ್ನಿಟ್ಟು ಅದನ್ನು ಪಿಳ್ಳೇರಾಯನೆಂದು ಕರೆದು ಅದಕ್ಕೆ ಪೂಜಿಸುವರು. ಮಿಕ್ಕೆಲ್ಲ ದೇವರುಗಳಂತೆ ಇದಕ್ಕೂ ಷೋಡಶಾಂಗ ಪೂಜಾವಿಧಾನದ ರೀತ್ಯಾ ಪೂಜಿಸುವರು.
ಪೂಜೆಯ ನಂತರ ಹತ್ತುದಿನಗಳ ವರೇಗೆ ನಿತ್ಯ ಪೂಜೆಯನ್ನು ಮಾಡಿ ೧೦ನೆಯ ದಿನ ಅಂದರೆ ಅನಂತ ಚತುರ್ದಶಿಯ ದಿನದಂದು ವಿಸರ್ಜನೆ ಮಾಡುವರು.ದೇಶದ ವಿವಿದೆಡೆ ವಿವಿಧ ರೀತಿಯಲ್ಲಿ ಗಣಪತಿಯ ಹಬ್ಬವನ್ನಾಚರಿಸುವರು. ದಕ್ಷಿಣ ದೇಶದಲ್ಲಿ ಮನೆ ಮನೆಗಳಲ್ಲಿ ಗಣಪತಿಯ ಮೂರ್ತಿಗೆ ಪೂಜಿಸಿದರೆ, ಮಹಾರಾಷ್ಟ್ರದಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಜನಗಳನ್ನು ಒಗ್ಗೂಡಿಸಲು ಆರಂಭಿಸಿದ ಸಾರ್ವಜನಿಕ ಗಣಪತಿ ಪೂಜೆ ಇಂದಿಗೂ ಹಾಗೆಯೇ ಮುಂದುವರೆಯುತ್ತಿದೆ.
“ಏಕದಂತಾಯ ವಿದ್ಮಹೇ ವಕ್ರತುಂಡಾಯ ಧೀಮಹಿ ತನ್ನೋ ದಂತಿ: ಪ್ರಚೋದಯಾತ್”
ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಅಂತ್ಯಂತ ವಿಜೃಂಭಣೆಯಿಂದ ಈ ಹಬ್ಬವನ್ನು ಆಚರಿಸುತ್ತಾರೆ. ಕರಾವಳಿ ಪ್ರದೇಶದಲ್ಲಿ ತನ್ನದೇ ಆದ ಪರಂಪರೆ ಹೊಂದಿದೆ. ಇಲ್ಲಿ ಡೊಳ್ಳು ಕುಣಿತ,ಹುಲಿವೇಷ, ಯಕ್ಷಗಾನ ಮುಂತಾದವು ಇಲ್ಲಿನ ಗಣೇಶೋತ್ಸವಕ್ಕೆ ಮೆರಗು ತರುತ್ತದೆ. ಕುಂದಾಪುರ, ಶಿರೂರು, ಮಂಗಳೂರು, ಉಡುಪಿ ಮುಂತಾದ ಕಡೆಯಲ್ಲಿ ಸುಂದರವಾದ ಸಂಭ್ರಮದ ಗಣೇಶ ಚತುರ್ಥಿ ನಡೆಯುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು