News Karnataka Kannada
Friday, May 03 2024
ಬೆಂಗಳೂರು

ಸಾಲುಮರದ ತಿಮ್ಮಕ್ಕರಿಗೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ

Salumarada Thimmakka 21092021
Photo Credit :

ಬೆಂಗಳೂರು: ತಮ್ಮ ನಿಶ್ವಾರ್ಥ ಪರಿಸರ ಸೇವೆ ಮೂಲಕ ಬದುಕನ್ನೇ ಪರಿಸರಕ್ಕಾಗಿ ಮುಡಿಪಿಟ್ಟ ವೃಕ್ಷಮಾತೆ ಸಾಲುಮರದ ತಿಮ್ಮಕ್ಕರಿಗೆ ಅಂತರಾಷ್ಟ್ರೀಯ ಸಂಸ್ಥೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ ನೀಡಿ ಗೌರವಿಸಿದೆ. ಎರಡು ದಿನಗಳ ಹಿಂದೆ ಬೆಂಗಳೂರಿನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಶಸ್ತಿ ಫಲಕ ನೀಡಿ ಗೌರವಿಸಿದ್ದಾರೆ.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಸರ್ಕಾರ ನೀಡುವ ಪ್ರತಿಷ್ಠಿತ ಪದ್ಮಶ್ರೀ, ನ್ಯಾಷನಲ್ ಸಿಟಿಜನ್ ಅವಾರ್ಡ್, ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ, ಗುಲ್ಬರ್ಗದ ಕೇಂದ್ರಿಯ ವಿವಿಯಿಂದ ಗೌರವ ಡಾಕ್ಟರೇಟ್ ಪಡೆದಿದ್ದ 111 ವರ್ಷದ ಶತಾಯುಷಿ ಸಾಲುಮರದ ತಿಮ್ಮಕ್ಕರಿಗೆ ಇದೀಗ ಅಂತಾಷ್ಟ್ರೀಯ ಮಟ್ಟದ ಸಂಸ್ಥೆಯೊಂದು ಅವರ ಸಾಧನೆ ಮೆಚ್ಚಿ ಪ್ರಶಸ್ತಿ ನೀಡಿ ಗೌರವಿಸಿದೆ.

80 ವರ್ಷಗಳಲ್ಲಿ ಪರಿಸರ ಕ್ಷೇತ್ರಕ್ಕೆ ಅಪೂರ್ವ ಕೊಡುಗೆ ನೀಡಿರುವ ಮಹಿಳೆ, 80 ವರ್ಷದಲ್ಲಿ 8 ಸಾವಿರ ಗಿಡಗಳನ್ನು ನೆಟ್ಟು ಬೆಳೆಸಿದ್ದಾರೆ. ಅವರು ನೆಟ್ಟ ಸಸಿಗಳು ಈಗ ಫಲನೀಡುತ್ತಾ ಸಮಾಜಕ್ಕೆ ಆಸ್ತಿಯಾಗಿವೆ ಎಂದು ಪ್ರಶಂಸೆ ವ್ಯಕ್ತಪಡಿಸಿರುವ ಸಂಸ್ಥೆ ರಾಜ್ಯಪಾಲರ ಮೂಲಕ ಗೌರವಪೂರ್ವಕವಾಗಿ ಪ್ರಶಸ್ತಿ ನೀಡಿದೆ. ಇನ್ನೊಂದು ವಿಶೇಷ ಅಂದರೆ ವೃಕ್ಷಮಾತೆ ಜೊತೆಗೆ ಅವರ ದತ್ತು ಪುತ್ರ ಉಮೇಶ್ ರವರಿಗೂ ಕೂಡ ತಾಯಿ ಜೊತೆಗೆ ಅಂತರಾಷ್ಟ್ಟೀಯಮಟ್ಟದ ಪ್ರಶಸ್ತಿ ಲಭಿಸಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು