News Karnataka Kannada
Thursday, May 02 2024
ಬೆಂಗಳೂರು

ಸಾವಿನ ಸಂಖ್ಯೆ ಬಹಿರಂಗ ಪಡಿಸಲಿ : ರಾಮಲಿಂಗ ರೆಡ್ಡಿ

Ramalingareddy
Photo Credit :

ಬೆಂಗಳೂರು : ಕೊರೋನಾದಿಂದ ಮೃತಪಟ್ಟವರ  ಸರಿಯಾದ ಲೆಕ್ಕವನ್ನು ರಾಜ್ಯ ಸರ್ಕಾರ ಬಹಿರಂಗ ಪಡೆಸಬೇಕು . ಇಲ್ಲದಿದ್ದರೆ ತನಿಖೆ ನಡೆಸುತ್ತೇವೆ ಎಂದು ಸಾರ್ವಜನಿಕ ಲೆಕ್ಕ ಪತ್ರಗಳ ಸಮಿತಿಯ ಅಧ್ಯಕ್ಷ ರಾಮಲಿಂಗಾರೆಡ್ಡಿ ತಿಳಿಸಿದರು.

ಕೋವಿಡ್‌ನಿಂದ ಕೇವಲ 50 ಸಾವಿರ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿದೆ. ಆದರೆ ಸುಮಾರು 3 ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂದು ಕೆಲ ಮೂಲಗಳು ಹೇಳುತ್ತಿವೆ. ಸಾವಿನ ಲೆಕ್ಕದಲ್ಲಿ ಭಾರೀ ಅಂತರ ಇರುವುದರಿಂದ ಅನುಮಾನ ವ್ಯಕ್ತವಾಗುತ್ತಿದೆ. ಆರೋಗ್ಯ ಇಲಾಖೆ ಸಮರ್ಪಕ ಮಾಹಿತಿ ನೀಡಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಡೆತ್‌ ಆಡಿಟ್‌ ನಡೆದರೆ ಎಲ್ಲವೂ ಬಹಿರಂಗವಾಗಲಿದೆ ಎಂದು ಹೇಳಿದರು.

ಸಾವಿನ ಬಗ್ಗೆ ಸರ್ಕಾರ ಸರಿಯಾದ ಮಾಹಿತಿ ನೀಡಿಲ್ಲ. ಡೆತ್‌ ಆಡಿಟ್‌ ನಡೆಯಬೇಕು ಎಂದು ಸದಸ್ಯ ಈಶ್ವರ ಖಂಡ್ರೆ ಪ್ರಸ್ತಾಪ ಮಾಡಿದರು. ಕೊರೋನಾ 2ನೇ ಮತ್ತು 3ನೇ ಅಲೆಯ ಬಗ್ಗೆಯೂ ಪ್ರಸ್ತಾಪವಾಯಿತು. ಮುಂದಿನ ವಾರ ಅಥವಾ 15 ದಿನಗಳ ನಂತರ ಮತ್ತೆ ಸಭೆ ನಡೆಯಲಿದೆ. ಅಷ್ಟರೊಳಗೆ ಸಾವಿನ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು