ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಉಪಚುನಾವಣೆಗೆ ಮತದಾನ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಉಪಚುನಾವಣೆಗೆ ಇಂದು ಬೆಳಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಮತದಾನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸಿಂದಗಿ ಕ್ಷೇತ್ರದಲ್ಲಿ ಜೆಡಿಎಸ್  ಮಾಜಿ ಸಚಿವ ಎಂ.ಸಿ. ಮನಗೂಳಿ ಅವರ ನಿಧನದಿಂದಾಗಿ ಉಪಚುನಾವಣೆ ನಡೆಯುತ್ತಿದ್ದು, ಸಿಂದಗಿಯಲ್ಲಿ ಕಾಂಗ್ರೆಸ್ ನಿಂದ ಮನಗೂಳಿ ಪುತ್ರ ಅಶೋಕ್ ಮನಗೂಳಿ ಸ್ಪರ್ಧಿಸಿದ್ದಾರೆ. ಬಿಜೆಪಿಯಿಂದ  ರಮೇಶ್ ಭೂಸನೂರು, ಜೆಡಿಎಸ್ ನಿಂದ ನಾಜಿಯಾ ಅಂಗಡಿ ಸೇರಿದಂತೆ 6 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಸಿಂದಗಿ ಕ್ಷೇತ್ರದಲ್ಲಿ ಒಟ್ಟು 2,34,584 ಮತದಾರರು ಮತ ಚಲಾಯಿಸಲಿದ್ದಾರೆ. ಈ ಪೈಕಿ 1,20,844 ಪುರುಷರು, 1,13,561 ಮಹಿಳೆಯರು ಹಾಗೂ 32 ಇತರೆ ಮತದಾರರು ಮತ ಚಲಾಯಿಸಲಿದ್ದಾರೆ. ಕ್ಷೇತ್ರದ ಎರಡು ಸಖಿ ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಒಟ್ಟು 297 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಹಾನಗಲ್ ಕ್ಷೇತ್ರದಲ್ಲಿ ಸಿ.ಎಂ. ಉದಾಸಿ ಅವರ ನಿಧನದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಬಿಜೆಪಿಯಿಂದ ಶಿವರಾಜ್ ಸಜ್ಜನರ, ಕಾಂಗ್ರೆಸ್ ನಿಂದ ಶ್ರೀನಿವಾಸ್ ಮಾನೆ,ಜೆಡಿಎಸ್ ನಿಂದ ನಿಯಾಜ್ ಶೇಕ್ ಸೇರಿದಂತೆ 13 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕ್ಷೇತ್ರದಲ್ಲಿ 1,05,525 ಪುರುಷ ಹಾಗೂ 98,953 ಮಹಿಳೆ ಹಾಗೂ ಮೂವರು ಇತರೆ ಮತದಾರರು ಸೇರಿದಂತೆ ಒಟ್ಟು 2,04,481 ಮತದಾರರು ಇದ್ದಾರೆ. ಕ್ಷೇತ್ರದ ಎರಡು ಕಡೆ ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಒಟ್ಟು 263 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಎರಡು ಕ್ಷೇತ್ರಗಳ ಫಲಿತಾಂಶ ನವೆಂಬರ್ 2 ರಂದು ಪ್ರಕಟವಾಗಲಿದೆ.

Gayathri SG

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

28 mins ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

52 mins ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

1 hour ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

2 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

3 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

3 hours ago