News Karnataka Kannada
Thursday, May 09 2024
ಬೆಂಗಳೂರು

ಸಿಎಂ ಬಸವರಾಜ ಬೊಮ್ಮಾಯಿ ಧ್ವಜಾರೋಹಣ: ರಾಜ್ಯವನ್ನು ಉದ್ದೇಶಿಸಿ ಭಾಷಣ

Indepenceday Cm Basavarajbommai 15082021
Photo Credit :

ಬೆಂಗಳೂರು: ರಾಜ್ಯ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಡಿನ ಜನತೆಗೆ ಸ್ವಾತಂತ್ರ್ಯ ದಿನದ ಶುಭಾಶಯಗಳನ್ನು ಕೋರಿದರು. ನಂತರ ಮಾತು ಆರಂಭಿಸಿದ ಅವರು ಇಂದಿನಿಂದ ನವ ಕರ್ನಾಟಕ ನಿರ್ಮಾಣ ಆರಂಭವಾಗುತ್ತದೆ. ಹೊಸ ಚಿಂತನೆ, ಹೊಸ ದಾರಿ, ಹೊಸ ದಿಕ್ಸೂಚಿ, ಮಾನವ ಸಂಪನ್ಮೂಲ ಬಳಸಿಕೊಂಡು ಹೊಸ ತಂತ್ರಜ್ಞಾನ ಬಳಕೆ ಮಾಡಿ, ವೈಜ್ಞಾನಿಕವಾಗಿ ಕೃಷಿ, ಸೇವಾ ವಲಯವನ್ನ ಮಾಡಲು ಸಂಕಲ್ಪ ಮಾಡಿದ್ದೇವೆ.

ನಮ್ಮದು ಯಶಸ್ವಿ ಪ್ರಜಾಪ್ರಭುತ್ವ ದೇಶವಾಗಿದೆ. ಈ ಪ್ರಜಾಪ್ರಬುತ್ವ ಯಶಸ್ವಿಯಾಗಲು ಸಂವಿಧಾನ ಮೂಲ ಕಾರಣವಾಗಿದೆ. ಸಂವಿಧಾನ ಒಂದು ವಿಕಾಸ ಗೀತೆಯಾಗಿದೆ. ಹೀಗಾಗಿ ಸಂವಿಧಾನ ನಮ್ಮೆಲ್ಲರ ಭಗವದ್ಗೀತೆಯಾಗಿದೆ. ಈ ಸಂದರ್ಭದಲ್ಲಿ ಡಾ.ಬಾಬಾ ಸಾಹೇಬಿ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸುತ್ತೇನೆಂದು ಹೇಳಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು