News Karnataka Kannada
Friday, May 03 2024
ಬೆಂಗಳೂರು

ಸಿಎಂ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ

Siddaramaiah Bang 17 6 21 No 176218 Newsk 3471785224
Photo Credit :

ಬೆಂಗಳೂರು : ಕೇಂದ್ರ ನೂತನ ಕೃಷಿ ಮಸೂದೆ ವಿರುದ್ಧದ ರೈತರ ಪ್ರತಿಭಟನೆಯನ್ನು ಪ್ರಾಯೋಜಿತ ಪ್ರತಿಭಟನೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರೈತರಿಗೆ ಅವಮಾನ ಮಾಡಿದ್ದಾರೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ದ ವಿಧಾನಮಂಡಲದ ಅಧಿವೇಶನದ ಕೊನೆಯ ದಿನವೂ ಕೂಡ ಕಾಂಗ್ರೆಸ್ ನಾಯಕರು ಟಾಂಗಾದಲ್ಲಿ ವಿಧಾನಸೌಧಕ್ಕೆ ಆಗಮಿಸಿ ವಿಭಿನ್ನ ಹೋರಾಟ ನಡೆಸಿದರು.

ಟಾಂಗಾ ಮೂಲಕ ವಿಧಾನಸೌಧಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರು ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ ಸರ್ಕಾರದ ವಿರುದ್ಧ ತೀವ್ರ ಕಿಡಿಕಾರಿದರು.

ಬಿಜೆಪಿ ಸರ್ಕಾರವನ್ನು ಕಿತ್ತೊಗೆಯೋವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ. ಇಂತಹ ಕೆಟ್ಟ ಸರ್ಕಾರವನ್ನು ರಾಜಕೀಯ ಜೀವನದಲ್ಲಿ ನೋಡಿಲ್ಲ. ಬಿಜೆಪಿಯವರು ಎಂದೂ ಜನಪರವಲ್ಲ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ನಾವು ಇಂದು ಬೆಲೆ ಏರಿಕೆ ವಿರುದ್ಧವಾಗಿ ಹೋರಾಟ ಮಾಡುತ್ತಿದ್ದೇವೆ. ಇದು ಮೂರನೇ ದಿನದ ಹೋರಾಟವಾಗಿದೆ ಮೊದಲನೇ ದಿನ ಎತ್ತಿನ ಗಾಡಿಯಲ್ಲಿ ಪ್ರತಿಭಟನೆ, 2ನೇ ದಿನ ಸೈಕಲ್‍ನಲ್ಲಿ. ಇಂದು ಟಾಂಗಾ ಗಾಡಿಯಲ್ಲಿ ಬಂದು ಪ್ರತಿಭಟನೆ ಮಾಡಿದ್ದೇವೆ. ಬಿಜೆಪಿ ಸರ್ಕಾರ ಜನಸಾಮಾನ್ಯರ ಬದುಕಿಗೆ ಬೆಂಕಿ ಇಟ್ಟಿದೆ. ಬಿಜೆಪಿ ಸರ್ಕಾರವನ್ನು ಕಿತ್ತೊಗೆಯೋವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಇಂತಹ ಕೆಟ್ಟ ಸರ್ಕಾರವನ್ನು ರಾಜಕೀಯ ಜೀವನದಲ್ಲಿ ನೋಡಿಲ್ಲ. ಬಿಜೆಪಿಯವರು ಎಂದೂ ಜನಪರವಲ್ಲ. ಬಿಜೆಪಿ ಸುಳ್ಳಿನ ಫ್ಯಾಕ್ಟರಿ, ಜನರ ಹಾದಿ ತಪ್ಪಿಸುವುದೇ ಇವರ ಕೆಲಸ ಲಜ್ಜೆಗೆಟ್ಟವರು ಇವರು ಭಂಡರು. ನಿಜವಾಗಿಯೂ ರೈತರ ಪರ, ಬಡವರ ಪರ ಇದ್ದರೆ ಕನಿಷ್ಠ 10 ರೂಪಾಯಿ ಕಡಿಮೆ ಮಾಡಿ ಎಂದು ಆಕ್ರೋಶವ್ಯಕ್ತಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು