ಬೆಂಗಳೂರು : ಭಾರತದಲ್ಲಿ ಸಿರಿಧಾನ್ಯಗಳ ಉತ್ಪಾದನೆ ಹೊಸ ವಿಚಾರವೇನಲ್ಲ, ಆದರೆ ಈ ಸಿರಿಧಾನ್ಯದ ಉತ್ಪಾದನೆ ಕ್ಷಿಣಿಸಿತ್ತು.
ಈ ನಡುವೆ ಮತ್ತೆ ಸಿರಿಧಾನ್ಯದ ಬೇಡಿಕೆ ಹೆಚ್ಚಾಗುತ್ತಿದೆ, ಈ ಹಿನ್ನಲೆಯಲ್ಲಿ ಸಿರಿಧಾನ್ಯವನ್ನು ಉತ್ಪಾದಿಸಲು ವಿಶೇಷ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಅವರು, ಕೃಷಿಯಿಂದ ವಿಮುಖರಾಗುವವರ ಸಂಖ್ಯೆ ಹೆಚ್ಚಳವಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದರು.
ಬೆಂಗಳೂರಿನ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ‘ವಿಶ್ವಸಂಸ್ಥೆ 2023 ರ ವರ್ಷವನ್ನು ಸಿರಿಧಾನ್ಯಗಳ ವರ್ಷ ಎಂದು ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರಮುಖವಾಗಿ ಕರ್ನಾಟಕ ರಾಜ್ಯದಲ್ಲಿ ಸಿರಿಧಾನ್ಯ ಬೆಳೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ದೇಶದಲ್ಲಿ ಪಾರಂಪರಿಕವಾಗಿ ಸಿರಿಧಾನ್ಯಗಳನ್ನು ಬೆಳೆಯುತ್ತಿರುವ ರಾಜ್ಯಗಳಿವೆ. ಆದರೆ ಇವುಗಳಿಗೆ ಪೂರಕ ವಾತಾವರಣ ಇಲ್ಲದಿದ್ದರೂ ಉತ್ತರಾಕಂಡ ರಾಜ್ಯ ಈ ಸಿರಿಧಾನ್ಯಗಳ ಬೆಳೆಗಳನ್ನು ಬೆಳೆಯುವುದರಲ್ಲಿ ಮುಂಚೂಣಿಯಲ್ಲಿದ್ದು, ಗುಣಮಟ್ಟವನ್ನೂ ಕಾಯ್ದುಕೊಂಡಿದೆ ಎಂದು ಹೇಳಿದರು. |
|
ಸಿರಿ ಧಾನ್ಯಕ್ಕೆ ವಿಶೇಷ ಪ್ರಧಾನ್ಯತೆ : ಶೋಭಾ ಕರಂದ್ಲಾಜೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.