News Karnataka Kannada
Monday, April 29 2024
ಬೆಂಗಳೂರು

ಸಿ.ಟಿ. ರವಿ ಹೇಳಿಕೆಗೆ ಬಿಜೆಪಿ ವಕ್ತಾರ ಗಣೇಶ್‌ ಕಾರ್ಣಿಕ್‌ ಬೆಂಬಲ

Ganesh Karnik 15082021
Photo Credit :

ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್‌ ಎಂಬುದಾಗಿ ಬದಲಿಸುವಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನೀಡಿರುವ ಹೇಳಿಕೆಯನ್ನು ಬೆಂಬಲಿಸುವುದಾಗಿ ಬಿಜೆಪಿ ರಾಜ್ಯ ಘಟಕದ ವಕ್ತಾರ ಗಣೇಶ್‌ ಕಾರ್ಣಿಕ್‌ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ, ವಾಕ್‌ ಸ್ವಾತಂತ್ರ್ಯವನ್ನೇ ದಮನ ಮಾಡಿದ್ದ ನಾಯಕಿಯ ಹೆಸರಿನಲ್ಲಿ ಬಡವರಿಗಾಗಿ ಯೋಜನೆಗಳನ್ನು ಘೋಷಿಸುವುದು ಎಷ್ಟು ಸರಿ? ಒಂದು ಕುಟುಂಬದ ಸದಸ್ಯರ ಹೆಸರಿನಲ್ಲಿ 600ಕ್ಕೂ ಹೆಚ್ಚು ಯೋಜನೆಗಳು, ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಕ್ರೀಡಾಂಗಣಗಳು ಇವೆ. ಇದು ಕಾಂಗ್ರೆಸ್‌ ಪಕ್ಷದ ಬೌದ್ಧಿಕ ದಿವಾಳಿತನ ಮತ್ತು ಗುಲಾಮಿ ಮನಸ್ಥಿತಿಗೆ ಸಾಕ್ಷಿ’ ಎಂದು ಟೀಕಿಸಿದ್ದಾರೆ.

ನಾಡಿನ ಜನರು ಬಯಸುತ್ತಿರುವ ಬದಲಾವಣೆಗೆ ಪೂರಕವಾಗಿ ಸಿ.ಟಿ. ರವಿ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್‌ ಪಕ್ಷವು ತನ್ನ ಸ್ವಾರ್ಥಕ್ಕಾಗಿ ಒಂದೇ ಕುಟುಂಬದ ಸದಸ್ಯರ ಹೆಸರನ್ನು ಎಲ್ಲದಕ್ಕೂ ನಾಮಕರಣ ಮಾಡುತ್ತಾ ಬಂದಿದೆ. ಪ್ರಜಾಪ್ರಭುತ್ವ ವಿರೋಧಿಯಾದ ಈ ನಡೆಯನ್ನು ಬಿಜೆಪಿ ಖಂಡಿಸುತ್ತದೆ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು