ಸೆ. 20ರಂದು ಸಿಇಟಿ ಫಲಿತಾಂಶ: ಡಾ.ಸಿ.ಎನ್. ಅಶ್ವತ್ಥನಾರಾಯಣ

ಬೆಂಗಳೂರು: ವೃತ್ತಿಪರ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶ ಇದೇ 20ರಂದು ಪ್ರಕಟವಾಗಲಿದೆ.

ಅ.1ರವರೆಗೆ ವೃತ್ತಿಪರ ಕೋರ್ಸ್‌ ಪದವಿ ಪ್ರವೇಶಕ್ಕೆ ಅವಕಾಶವಿದೆ. ಎಂಜಿನಿಯರಿಂಗ್‌ ಕೋರ್ಸ್‌ಗಳ ಶುಲ್ಕದ ಬಗ್ಗೆ ಮುಂದಿನ ವಾರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಶುಕ್ರವಾರ ತಿಳಿಸಿದರು.

ಫಲಿತಾಂಶ ಪ್ರಕಟವಾದ ನಂತರ ನಿಗದಿತ ವೇಳಾಪಟ್ಟಿಯಂತೆ ಕೌನ್ಸೆಲಿಂಗ್‌ ನಡೆಸಲಾಗುವುದು. ಶೈಕ್ಷಣಿಕ ವರ್ಷ ಆರಂಭ ಹೆಚ್ಚು ವಿಳಂಬವಾಗಲು ಬಿಡುವುದಿಲ್ಲ ಎಂದೂ ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿ ನೆಪದಲ್ಲಿ ಶುಲ್ಕ ಹೆಚ್ಚಳಕ್ಕೆ ಅವಕಾಶವೇ ಇಲ್ಲ. ಈ ಬಗ್ಗೆ ದೂರುಗಳು ಬಂದರೆ ಆಯಾ ಕಾಲೇಜುಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದೂ ಅವರು ಎಚ್ಚರಿಸಿ ದರು. ಫಲಿತಾಂಶಕ್ಕಾಗಿ https://cetonline.karnataka.gov.in ವೆಬ್‌ಸೈಟ್‌ ಸಂಪರ್ಕಿಸಬಹುದು.

Sampriya YK

Recent Posts

ತರಕಾರಿ, ಬೇಳೆ ಕಾಳು, ಹಣ್ಣು, ಮಾಂಸ ದರ ಭಾರೀ ಏರಿಕೆ

ತಾಪಮಾನ ಏರಿಕೆ, ನೀರಿನ ಕೊರತೆ ಮೊದಲಾದ ಕಾರಣಗಳಿಂದ ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಬಡ, ಮಧ್ಯಮ ವರ್ಗದವರು…

17 mins ago

ತಾಮ್ರದ ಗಣಿಯೊಳಗೆ ಸಿಲುಕಿದ್ದ 14 ಅಧಿಕಾರಿಗಳ ರಕ್ಷಣೆ

ಕೋಲಿಹಾನ್‌ನ ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ ಗಣಿಯಲ್ಲಿ ಲಿಫ್ಟ್ ಹಗ್ಗ ಮುರಿದು ಗಣಿಯೊಳಗೆ ಸಿಲುಕಿಗೊಂಡಿದ್ದ 14 ಜನರನ್ನು ರಕ್ಷಿಸಲಾಗಿದೆ. ಮಂಗಳವಾರ ತಡರಾತ್ರಿ…

21 mins ago

ಬೆಳ್ಳಂಬೆಳಗ್ಗೆ ಹರಿದ ನೆತ್ತರು : ಪಾಗಲ್‌ ಪ್ರೇಮಿಯಿಂದ ಯುವತಿಯ ಹತ್ಯೆ

ಬೆಳ್ಳಂಬೆಳಗ್ಗೆ ಮನೆಯಲ್ಲಿ ಮಲಗಿದ್ದ ಯುವತಿಗೆ ಚಾಕು ಇರಿದು ಕೊಲೆ ಮಾಡಿ ಎಸ್ಕೇಪ್‌ ಆಗಿರುವ ಘಟನೆ ನಡೆದಿದೆ.

38 mins ago

ತಾಮ್ರದ ಗಣಿ ಪರಿಶೀಲನೆಗೆ 1,800 ಅಡಿ ಆಳಕ್ಕೆ ಹೋದ 14 ಮಂದಿ ಟ್ರ್ಯಾಪ್

 ರಾಜಸ್ಥಾನದ ಜುಂಜುನುದಲ್ಲಿರುವ ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನ ಕೋಲಿಹಾನ್ ಗಣಿಯಲ್ಲಿ ಮಂಗಳವಾರ ರಾತ್ರಿ ಲಿಫ್ಟ್​ ಚೈನ್ ತುಂಡಾಗಿ ಗಣಿ ತಪಾಸಣೆಗೆಂದು ಹೋದ…

1 hour ago

ಮೈಸೂರಿನಲ್ಲಿ ವೆಸ್ಟ್ ನೈಲ್ ಜ್ವರದ ಭೀತಿ : ಗಡಿಭಾಗದಲ್ಲಿ ಹೈ ಅಲರ್ಟ್!

ಕೇರಳದಲ್ಲಿ ಹೆಚ್ಚಾದ ವೆಸ್ಟ್ ನೈಲ್ ಜ್ವರದಿಂದ ಮೈಸೂರು ಗಡಿಭಾಗದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಬಾವಲಿ ಚೆಕ್ ಪೋಸ್ಟ್‍ನಲ್ಲಿ ಆರೋಗ್ಯಾಧಿಕಾರಿಗಳಿಂದ ತಪಾಸಣೆ…

1 hour ago

ಡಾಲಿ ನಟನೆಯ‘ಕೋಟಿ’ ಸಿನಿಮಾ ಮೊದಲ ಹಾಡು ಬಿಡುಗಡೆ

ಡಾಲಿ ಧನಂಜಯ್‌ ನಟಿಸಿರುವ ‘ಕೋಟಿ’ ಸಿನಿಮಾದ ಟೀಸರ್ ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿ ಸದ್ದು ಮಾಡಿತ್ತು. ಇದೀಗ ಸಿನಿಮಾದ…

2 hours ago