News Karnataka Kannada
Monday, April 29 2024
ಬೆಂಗಳೂರು

‘ಸ್ಟೋರಿ ಆಫ್ ಸೌಜನ್ಯ’: ಸಿನಿಮಾ ಆಗಲಿದೆ ಧರ್ಮಸ್ಥಳದ ಸೌಜನ್ಯ ಸಾವಿನ ಕಥೆ

soujanya story film
Photo Credit : News Kannada

ಬೆಂಗಳೂರು: ನೈಜ ಘಟನೆ ಇಟ್ಟುಕೊಂಡು ಅನೇಕ ಸಿನಿಮಾಗಳು ಈಗಾಗಲೇ ಮೂಡಿಬಂದಿವೆ. ಅತ್ಯಾಚಾರಕ್ಕೆ ಒಳಗಾದ ಅನೇಕ ಮಹಿಳೆಯರ ಬಗ್ಗೆಯೂ ಸಿನಿಮಾಗಳು ಆಗಿವೆ. ಈಗ ಧರ್ಮಸ್ಥಳದಲ್ಲಿ ನಡೆದ ಘಟನೆ ಆಧರಿಸಿ ಸ್ಯಾಂಡಲ್​ವುಡ್​ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಇದೇ ಪ್ರಕರಣ ಇಟ್ಟುಕೊಂಡು ಸಿನಿಮಾ ಮಾಡಲಾಗುತ್ತಿದೆ ಎನ್ನಲಾಗಿದೆ. ಈ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ ಆಗಿದೆ. ಜಿಕೆ ವೆಂಚರ್ಸ್ ಈ ಟೈಟಲ್ ನೋಂದಣಿ ಮಾಡಿಸಿದೆ. ವಿ. ಲವ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸಾಮಾಜಿಕ ಕಥಾ ಹಂದರ ಹೊಂದಿರಲಿದೆ. ಈ ಚಿತ್ರ ಕನ್ನಡದಲ್ಲಿ ಮಾತ್ರ ಸಿದ್ಧವಾಗಲಿದೆ ಎಂದು ಮೂಲಗಳು ತಿಳಿಸಿವೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು