ಬೆಂಗಳೂರು: ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಹತ್ತು ವರ್ಷದ ಪುತ್ರನನ್ನು ಕೊಂದು ಸಾಕ್ಷ್ಯ ನಾಶಪಡಿಸಲು ಯತ್ನಿಸಿದ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ.
ಪ್ರಕರಣ ದಾಖಲಿಸಿದ ಮೈಕೋ ಲೇಔಟ್ ಠಾಣೆ ಪೊಲೀಸರು ಬಾಲಕನ ತಾಯಿ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.
ಬಾಲಕನ ತಾಯಿ ಸಿಂಧು, ಆಕೆಯ ಸ್ನೇಹಿತ ತಮಿಳುನಾಡು ಮೂಲದ ರೌಡಿ ಶೀಟರ್ ಸುನಿಲ್ ಹಾಗೂ ಆತನ ಪ್ರಿಯತಮೆಯನ್ನು ಬಂಧಿಸಲಾಗಿದೆ. ಮೂವರನ್ನೂ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಬೇಕಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.