ಹಬ್ಬದ ಸಂದರ್ಭಕ್ಕಾಗಿ ಬರೋಬ್ಬರಿ ಒಂದು ಸಾವಿರ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಆರಂಭ

ಬೆಂಗಳೂರು : ಹಬ್ಬಗಳು ಇನ್ನೇನು ಹತ್ತಿರವಿದೆ ಎಂದಾಗ ಬಸ್, ರೈಲು ಸಿಗದೆ ಜನರು ತಮ್ಮ ಊರುಗಳಿಗೆ ತೆರಳಲು ಕಷ್ಟಪಡುತ್ತಾರೆ. ಬಸ್‌ಸ್ಟಾಂಡ್‌ಗಳಲ್ಲಿ ಕುಳಿತು ಸೀಟ್ ಇರುವ ಬಸ್‌ಗಾಗಿ ಕಾದು ಹೈರಾಣಾಗುತ್ತಾರೆ. ಆದರೆ ಈ ಬಾರಿ ಇದ್ಯಾವುದಕ್ಕೂ ಅವಕಾಶ ಇಲ್ಲ, ಏಕೆಂದರೆ ಕೆಎಸ್‌ಆರ್‌ಟಿಸಿ ಹಬ್ಬದ ಸಂದರ್ಭಕ್ಕಾಗಿ ಬರೋಬ್ಬರಿ ಒಂದು ಸಾವಿರ ಹೆಚ್ಚುವರಿ ಬಸ್‌ಗಳ ಸಂಚಾರ ಆರಂಭಿಸಲಿದೆ.

ಬೆಂಗಳೂರಿನಿಂದ 1000 ಹೆಚ್ಚುವರಿ ಬಸ್‌ಗಳು ಸಂಚರಿಸಲಿದ್ದು, ಸಮಸ್ಯೆಯಿಲ್ಲದೆ ಪ್ರಯಾಣಿಕರು ಊರು ತಲುಪಬಹುದಾಗಿದೆ.
ದಸರಾ ಮತ್ತು ದೀಪಾವಳಿ ಸಂದರ್ಭದಲ್ಲಿ ಪ್ರತಿ ಬೆಂಗಳೂರಿಗರೂ ತಮ್ಮ ಊರುಗಳಿಗೆ ತೆರಳಲು ಇಚ್ಛಿಸುತ್ತಾರೆ. ಇದೇ ಕಾರಣದಿಂದ ದಸರಾ ಸಂದರ್ಭದಲ್ಲಿ ಅ.13 ರಿಂದ 21 ರವರೆಗೆ, ದೀಪಾವಳಿ ಸಂದರ್ಭದಲ್ಲಿ ಅ.29 ರಿಂದ ನ.7 ರವರೆಗೆ ವಿಶೇಷ ಬಸ್ ಸೌಲಭ್ಯ ಇರುತ್ತದೆ.

ಹೆಚ್ಚುವರಿ ಬಸ್‌ಗಳು ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು, ಮಡಿಕೇರಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ ಬೀದರ್‌ ಮುಂತಾದ ಸ್ಥಳಗಳಿಗೆ ತೆರಳುತ್ತವೆ. ಇದಲ್ಲದೆ ಹೊರರಾಜ್ಯದ ತಿರುಪತಿ, ವಿಜಯವಾಡ, ಹೈದರಾಬಾದ್, ತಿರುವನಂತಪುರ, ಕೊಟ್ಟಾಯಂ, ಚೆನ್ನೈ, ಕೊಯಮತ್ತೂರು, ಪೂನಾ, ಪಣಜಿ ಮುಂತಾದ ಸ್ಥಳಗಳಿಗೂ ಬಸ್‌ಗಳ ಸಂಚಾರ ಇರಲಿದೆ.

Sneha Gowda

Recent Posts

ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…

8 mins ago

ಚಾಮರಾಜನಗರದಲ್ಲಿ ಉಡ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…

20 mins ago

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

30 mins ago

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

41 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

59 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

1 hour ago