ಬೆಂಗಳೂರು : ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ-ಚುನಾವಣೆ ಘೋಷಣೆ ಬೆನ್ನಲ್ಲೇ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಫೈನಲ್ ಮಾಡಿದೆ. ಈ ಹಿಂದೆ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿದ್ದ ನಿಯಾಜ್ ಶೇಕ್ ಅವರಿಗೆ ಜೆಡಿಎಸ್ ಈ ಬಾರಿ ಟಿಕೆಟ್ ನೀಡಿದೆ.
ಹಾನಗಲ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಿಯಾಜ್ ಶೇಕ್ ಅವರ ಹೆಸರನ್ನು ಈ ಹಿಂದೆಯೇ ಕುಮಾರಸ್ವಾಮಿಯವರು ಘೋಷಣೆ ಮಾಡಿದ್ದರು. ಅದರಂತೆಯೇ ಇಂದು ನಿಯಾಜ್ ಶೇಕ್ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಣೆ ಮಾಡುವುದರ ಜತೆಗೆ ಬಿ ಫಾರಂ ನೀಡಿದರು.
ಹಾವೇರಿ ಜಿಲ್ಲಾ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿದ್ದ ನಿಯಾಜ್ ಶೇಕ್ ಅವರು ಇತ್ತೀಚೆಗಷ್ಟೇ ಜೆಡಿಎಸ್ ಸೇರಿದ್ದರು. ಹಾನಗಲ್ ಉಪಚುನಾವಣೆಯ ಟಿಕೆಟ್ ಕನ್ಫರ್ಮ್ ಮಾಡಿಕೊಂಡು ಜೆಡಿಎಸ್ ಸೇರಿದ್ದರು.