ಹಾನಗಲ್ ಮತ್ತು ಸಿಂಧಗಿ ಕ್ಷೇತ್ರದ ಉಪಚುನಾವಣೆ : ನವೆಂಬರ್ 2ಕ್ಕೆ ಮತ ಎಣಿಕೆ

ಬೆಂಗಳೂರು, ಅ. 31 : ಹಾನಗಲ್ ಮತ್ತು ಸಿಂಧಗಿ ಕ್ಷೇತ್ರದ ಉಪ ಚುನಾವಣೆ ಮುಗಿದಿದ್ದು ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. ನವೆಂಬರ್ 2ರ ಮಂಗಳವಾರ ಮತ ಎಣಿಕೆ ನಡೆಯಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ.

ನವೆಂಬರ್ 2ರ ಮಂಗಳವಾರ ಮತ ಎಣಿಕೆ ನಡೆಯಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ. ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದಲ್ಲಿ 13 ಅಭ್ಯರ್ಥಿಗಳು ಕಣಲ್ಲಿದ್ದಾರೆ. ಶನಿವಾರ ಕ್ಷೇತ್ರದಲ್ಲಿ 83.44ರಷ್ಟು ಮತದಾನವಾಗಿದೆ. ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ 6 ಅಭ್ಯರ್ಥಿಗಳು ಕಣದಲ್ಲಿದ್ದು, ಶೇ 69.41ರಷ್ಟು ಮತದಾನ ನಡೆದಿದೆ.

ಹಾನಗಲ್‌ನಲ್ಲಿ ಶಾಸಕ ಸಿ. ಎಂ. ಉದಾಸಿ ನಿಧನದಿಂದ ಮತ್ತು ಸಿಂಧಗಿಯಲ್ಲಿ ಶಾಸಕ ಎಂ. ಸಿ. ಮುನಗೂಳಿ ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯಿತು. ಮೂರು ಪಕ್ಷಗಳಿಗೆ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ವೈಯಕ್ತಿಕ ಟೀಕೆಗಳಗೂ ಚುನಾವಣಾ ಪ್ರಚಾರ ಸಾಕ್ಷಿಯಾಗಿತ್ತು. ಎರಡೂ ಕ್ಷೇತ್ರದಲ್ಲಿ ಶಾಂತಿಯುತವಾಗಿ ಮತದಾನ ನಡೆದಿದೆ. ಕೋವಿಡ್ ಮಾರ್ಗಸೂಚಿ ಪ್ರಕಾರ ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಮತದಾರರ ಥರ್ಮಲ್ ಸ್ಕ್ಯಾನಿಂಗ್ ಮಾಡಿ ಮತದಾನಕ್ಕೆ ಅವಕಾಶ ಮಾಡಿಕೊಟ್ಟರು.

ಪ್ರಮುಖ ಅಭ್ಯರ್ಥಿಗಳು ಉಪ ಚುನಾವಣೆಯಲ್ಲಿ ರಾಜ್ಯದ ಆಡಳಿತ ಪಕ್ಷ ಬಿಜೆಪಿಯ ಅಭ್ಯರ್ಥಿಗಳು ಸೋತರೂ ಸರ್ಕಾರಕ್ಕೆ ಯಾವುದೇ ರೀತಿಯ ಧಕ್ಕೆ ಆಗುವುದಿಲ್ಲ. ಆದರೆ ರಾಜ್ಯ ಸರ್ಕಾರಕ್ಕೆ ಉಪ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.

ಅದರಲ್ಲೂ ಜುಲೈ 26ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಬಿ. ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಉಪ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವುದು ಮೊದಲ ಸವಾಲು ಆಗಿದೆ. ಹಾನಗಲ್ ಕ್ಷೇತ್ರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುವ ಕ್ಷೇತ್ರದ ಪಕ್ಕದ ಕ್ಷೇತ್ರವಾಗಿದೆ. ಆದ್ದರಿಂದ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಿಸಿಬೇಕು ಎಂದು ಹಾನಗಲ್‌ನಲ್ಲಿಯೇ ಹಲವು ದಿನಗಳ ಕಾಲ ಮುಖ್ಯಮಂತ್ರಿಗಳು ಪ್ರಚಾರ ನಡೆಸಿದ್ದರು.

ಉಪ ಚುನಾವಣೆಯಲ್ಲಿ ಸಿಂಧಗಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಅಶೋಕ್ ಮನಗೂಳಿ, ಬಿಜೆಪಿಯಿಂದ ರಮೇಶ್ ಭೂಸನೂರ, ಜೆಡಿಎಸ್‌ನಿಂದ ನಾಜಿಯಾ ಶಕೀಲಾ ಅಂಗಡಿ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು.

ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಶ್ರೀನಿವಾಸ ಮಾನೆ, ಬಿಜೆಪಿಯಿಂದ ಶಿವರಾಜ್ ಸಜ್ಜನರ, ಜೆಡಿಎಸ್‌ ಪಕ್ಷದಿಂದ ನಿಯಾಜ್ ಶೇಕ್ ಪ್ರಮುಖ ಅಭ್ಯರ್ಥಿಗಳು. 2018ರ ಚುನಾವಣೆಯಲ್ಲಿ ಹಾನಗಲ್‌ನಲ್ಲಿ ಬಿಜೆಪಿ, ಸಿಂಧಗಿಯಲ್ಲಿ ಜೆಡಿಎಸ್ ಗೆದ್ದಿತ್ತು.

ಬಿಜೆಪಿ ಮತ್ತು ಜೆಡಿಎಸ್ 2018ರ ಚುನಾವಣೆಯಲ್ಲಿ ಗೆದ್ದಿದ್ದ ಕ್ಷೇತ್ರವನ್ನು ಉಳಿಸಿಕೊಳ್ಳಲು ಹೋರಾಟ ಮಾಡುತ್ತಿವೆ. ಎರಡೂ ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ ಇತ್ತು. ಆದ್ದರಿಂದ ಉಪ ಚುನಾವಣೆ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ.

Gayathri SG

Recent Posts

ಹಳ್ಳಕ್ಕೆ ತಡೆಗೋಡೆ ನಿರ್ಮಾಣ: ತೆರವಿಗೆ ಆಗ್ರಹಿಸಿ ಮನವಿ

ಕೊಪ್ಪಾ ತಾಲೂಕಿನ ಕಾಡ್ಕೆರೆಯಲ್ಲಿ ಕುಡಿಯುವ ನೀರಿನ ಹಳ್ಳಕ್ಕೆ ಪ್ರಭಾವಿಗಳು ನಿರ್ಮಿಸಿರುವ ತಡೆಗೋಡೆಯನ್ನು ತೆರವುಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು…

11 mins ago

ಆನೆ ಸೆರೆ ಕಾರ್ಯಾಚರಣೆಗೆ ಸಿದ್ಧತೆ: ಪುಂಡಾನೆ ಪತ್ತೆಗೆ ಟ್ರ್ಯಾಪ್ ಕ್ಯಾಮೆರಾ

ಕಾಡಾನೆ ಹಾವಳಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದು ವರ್ಷದ ಅವಧಿಯಲ್ಲಿ ಐದು ಜನ ಪ್ರಾಣ ಕಳೆದುಕೊಂಡಿದ್ದಾರೆ.

27 mins ago

ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಇಬ್ಬರ ಕೊಲೆ

ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಜೋಡಿ ಕೊಲೆ ಮಾಡಲಾದ ಘಟನೆ ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ನಡೆದಿದೆ.

38 mins ago

ರೈತರ ಕಷ್ಟ ಕೇಳುವವರಿಲ್ಲ: ವಿನಯ್ ಗುರೂಜಿ ವಿಷಾದ

ದೊಡ್ಡ ದೊಡ್ಡವರ ಕಷ್ಟ ಕೇಳಲು ದೊಡ್ಡ ದೊಡ್ಡವರಿದ್ದಾರೆ. ಆದರೆ ಜಗತ್ತಿಗೆ ಅನ್ನ ನೀಡುವ ರೈತನ ಕಷ್ಟ ಕೇಳುವ ಮನಸ್ಸು ದೊಡ್ಡವರಿಗಿಲ್ಲ…

52 mins ago

ಕೈಕೊಟ್ಟ ಶೀತಲಯಂತ್ರಗಳಿಂದ ಶವಾಗಾರದಲ್ಲಿ ದುರ್ವಾಸನೆ

ಎಲ್ಲರೂ ಮೂಗುಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಮೈಸೂರಿನ ಸರ್ಕಾರಿ ಮೆಡಿಕಲ್ ಕಾಲೇಜು  ಬಳಿಯ ಶವಾಗಾರದ ಬಳಿ ಎದುರಾಗಿದೆ. ಇದಕ್ಕೆ ಶವಾಗಾರದ ಶೀತಲ…

58 mins ago

ಸಾಗರೋತ್ತರ ಕಾಂಗ್ರೆಸ್‌  ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್‌ ಪಿತ್ರೋಡಾ ರಾಜೀನಾಮೆ

“ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಇದ್ದಾರೆ” ಎಂಬುದಾಗಿ ಹೇಳುವ ಮೂಲಕ ಮನುಷ್ಯರ ಚರ್ಮದ ಬಣ್ಣದ ಕುರಿತು ಕೀಳು ಹೇಳಿಕೆ ನೀಡಿ ವಿವಾದ…

1 hour ago