ಹೆಚ್ ಡಿ ಕುಮಾರಸ್ವಾಮಿ ಮಾತಿಗೆ ನಾನ್ ಸೆನ್ಸ್ ಎಂದ ನಟ ಚೇತನ್

ಬೆಂಗಳೂರು : ಕರ್ನಾಟಕದಲ್ಲಿ ಆಡಳಿತದ ಅವಕಾಶ ಸಿಕ್ಕರೆ ಸಾಕಷ್ಟು ಬದಲಾವಣೆಯನ್ನು ತರಬಹುದು ಎಂಬ ಕುಮಾರಸ್ವಾಮಿ ಮಾತಿಗೆ ನಟ ಚೇತನ್ ಅರ್ಥ ವಿಲ್ಲದ ಮಾತು ನಾನ್ ಸೆನ್ಸ್ ಎಂದು ಟೀಕಿಸಿದ್ದಾರೆ .
ಈ  ಕುರಿ  ಟ್ವೀಟ್ ಮಾಡಿರುವ ಚೇತನ್, ಕರ್ನಾಟಕವನ್ನು 5 ವರ್ಷಗಳ ಮುನ್ನಡೆಸುವ ಸ್ವಾತಂತ್ರ್ಯವಿದ್ದಿದ್ದರೆ ಕ್ರಾಂತಿಕಾರಿ ಬದಲಾವಣೆಗಳನ್ನು ತರುತ್ತೇನೆಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮೊದಲಿಗೆ, 2 ಬಾರಿ ಅವರು ಸಿಎಂ ಆಗಿದ್ದಾಗಲೂ ಕೂಡಾ ನಮ್ಮ ರಾಜ್ಯಕ್ಕೆ ಅಂತಹದೇನೂ ಕ್ರಾಂತಿಕಾರಿ ಮಾಡಲಿಲ್ಲ, ಪ್ರಯತ್ನವನ್ನು ಮಾಡಲಿಲ್ಲ. ಮುಖ್ಯವಾಗಿ ಅವರಿಗೆ ಕ್ರಾಂತಿಕಾರಿ ದೃಷ್ಟಿ ಇಲ್ಲ ಮತ್ತು ಯಥಾಸ್ಥಿತಿ ಚಿಂತನೆ ಪ್ರಕ್ರಿಯೆಯು ಅಧಿಕಾರಕ್ಕೆ ಮುಂಚಿತವಾಗಿರಬೇಕು ಇವುಗಳೆಲ್ಲಾ ನಾನ್ ಸೆನ್ಸ್ ಪದಗಳು ಎಂದು ಚೇತನ್ ಹೇಳಿದ್ದಾರೆ.

ಚೇತನ್ ಅವರ ಅಭಿಪ್ರಾಯಕ್ಕೆ ಪ್ರತಿಕ್ರಿಯಿಸಿರುವ ಜೆಡಿಎಸ್ ಮಾಹಿತಿ ತಂತ್ರಜ್ಞಾನ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಪ್ರತಾಪ್ ಕಣಗಾಲ್,  ತಾವೊಬ್ಬ ಹೋರಾಟಗಾರ ಎಂದು ಬಿಂಬಿಸಿಕೊಳ್ಳುವ ಚೇತನ್, ರಾಷ್ಟ್ರವಾದಿ ನಟಿಯರಂತೆ ಕೇವಲ ಗಮನ ಸೆಳೆಯುವ ಪ್ರಯತ್ನ ಮಾಡಿ ವಿಫಲ ನಟನಾಗಿ ಉಳಿದಿದ್ದಾರೆ. ಯಾವ ವಿಷಯವನ್ನು ಅರಿಯದೆ ಎಲ್ಲದರಲ್ಲೂ ಮೂಗು ತೂರಿಸುತ್ತಾರೆ ಎಂದು ಟೀಕಿಸಿದ್ದಾರೆ.

Raksha Deshpande

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

6 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

7 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

7 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

7 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

9 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

9 hours ago