ಬೆಂಗಳೂರು : ಹೈಕಮಾಂಡ್ ಬುಲಾವ್ ಮೇರೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಬೆಳಗ್ಗೆ 7:30ರ ವಿಮಾನದಲ್ಲಿ ಬೆಂಗಳೂರಿನಿಂದ ದೆಹಲಿಗೆ ತೆರಳಿದ್ದು, ಮಧ್ಯಾಹ್ನ 12.30ಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ.
ಈಗಾಗಲೇ ಸಿಂಧಗಿ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಫೈನಲ್ ಆಗಿದ್ದು, ಮನಗೂಳಿ ಕಣದಲ್ಲಿದ್ದು, ಹಾನಗಲ್ ಉಪ ಚುನಾವಣೆ ಕ್ಷೇತ್ರದ ಟಿಕೆಟ್ ಹಂಚಿಕೆ ಕುರಿತು ಚರ್ಚಿಸಲು ದೆಹಲಿಗೆ ತೆರಳಿಸದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ಪಕ್ಷ ಬಲಪಡಿಸುವ ಕುರಿತು ಹಾಗೂ ಕೆಪಿಸಿಸಿ ಪುನರ್ ರಚನೆ ವಿಚಾರವಾಗಿ ಸಿದ್ದರಾಮಯ್ಯಗೆ ಕಾಂಗ್ರೆಸ್ ಹೈಕಮಾಂಡ್ ಕರೆ ನೀಡಿದೆ ಎಂದು ತಿಳಿದು ಬಂದಿದೆ.