​ ಸಮಾಧಿ ಬಳಿ ಕುಟುಂಬದವರಿಂದ ಪುನೀತ್ 11ನೇ ದಿನದ ಪೂಜೆ

ಬೆಂಗಳೂರು: ಕೋಟ್ಯಂತರ ಅಭಿಮಾನಿಗಳ ಕಣ್ಮಣಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ 11 ದಿನ ಕಳೆದಿದೆ. ಈ ಹಿನ್ನೆಲೆಯಲ್ಲಿ ಇಂದು (ನ.8) ಅವರ ಪುಣ್ಯ ಸ್ಮರಣೆ ಕಾರ್ಯ ನಡೆಯುತ್ತಿದೆ.11ನೇ ದಿನದ ಪೂಜೆಯಲ್ಲಿ ಅಪ್ಪು ಕುಟುಂಬದವರು ಭಾಗಿ ಆಗಿದ್ದಾರೆ.

ಬೆಳಗ್ಗೆ 10 ಗಂಟೆ ಸುಮಾರಿಗೆ ಅಪ್ಪು ಪತ್ನಿ ಅಶ್ವಿನಿ, ಮಕ್ಕಳಾದ ಧ್ರುತಿ, ವಂದಿತಾ, ಸಹೋದರರಾದ ಶಿವರಾಜ್​ಕುಮಾರ್, ರಾಘವೇಂದ್ರ ರಾಜ್​ಕುಮಾರ್​ ಸೇರಿದಂತೆ ಇಡೀ ಕುಟುಂಬದ ಸದಸ್ಯರು ಪುನೀತ್​ ಸಮಾಧಿ ಸ್ಥಳಕ್ಕೆ ಬಂದು ಪೂಜೆ ಸಲ್ಲಿಸಲಿದ್ದಾರೆ.

ಭಾನುವಾರ (ನ.7) ರಾತ್ರಿಯಿಂದಲೇ ಈ ಕಾರ್ಯಕ್ಕೆ ಸಕಲ ಸಿದ್ಧತೆ ಶುರುವಾಗಿತ್ತು. ಇಂದು ಬೆಳಗ್ಗೆಯೇ ಸದಾಶಿವನಗರದಲ್ಲಿರುವ ಪುನೀತ್​ ರಾಜ್​ಕುಮಾರ್​ ಅವರ ನಿವಾಸದಲ್ಲಿ ಪೂಜಾ ಕಾರ್ಯಗಳು ಆರಂಭ ಆಗಿವೆ.

ಚಿಕ್ಕಪ್ಪನ ಪುಣ್ಯ ತಿಥಿ ಕಾರ್ಯ ನೆರವೇರಿಸುವ ಮೂಲಕ ವಿನಯ್ ರಾಜ್ ಕುಮಾರ್ ಕೇಶಮುಂಡನ ಮಾಡಿಸಿಕೊಂಡು ಅಗಲಿದ ಅಪ್ಪುಗೆ ಪಿಂಡ ಪ್ರದಾನ ಮಾಡಲಿದ್ದಾರೆ.

ಬೆಳಗ್ಗೆ 11 ಗಂಟೆ ನಂತರ ಪುಣ್ಯತಿಥಿ ಕಾರ್ಯ ಜರುಗಲಿದ್ದು. ಕುಟುಂಬಸ್ಥರು, ಹತ್ತಿರದ ಸಂಬಂಧಿಗಳು, ಚಿತ್ರರಂಗದ ಪ್ರಮುಖರು, ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ.

12 ಗಂಟೆವರೆಗೆ ಸಾರ್ವಜನಿಕರಿಗೆ ಪ್ರವೇಶವಿಲ್ಲ
ಪ್ರತಿದಿನ ಅಪಾರ ಸಂಖ್ಯೆಯ ಅಭಿಮಾನಿಗಳು ಅಪ್ಪು ಸಮಾಧಿಗೆ ಭೇಟಿ ನೀಡುತ್ತಿದ್ದಾರೆ. ಜನರು ಕಿಲೋ ಮೀಟರ್​ಗಟ್ಟಲೆ ಉದ್ದದ ಸಾಲಿನಲ್ಲಿ ನಿಂತು ಕಾಯುತ್ತಿರುವ ದೃಶ್ಯ ದಿನವೂ ಕಂಡು ಬರುತ್ತಿದೆ.

ಇಂದು 11ನೇ ದಿನದ ಕಾರ್ಯವಾದ್ದರಿಂದ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಬರುವ ಸಾಧ್ಯತೆ ಇದೆ. ಆದರೆ ಮಧ್ಯಾಹ್ನ 12 ಗಂಟೆಯವರೆಗೆ ಕಂಠೀರವ ಸ್ಟುಡಿಯೋ ಆವರಣದೊಳಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. 12 ಗಂಟೆ ಬಳಿಕ ಅಪ್ಪು ಸಮಾಧಿ ದರ್ಶನ ಮಾಡಲು ಅಭಿಮಾನಿಗಳಿಗೆ ಅವಕಾಶ ಸಿಗಲಿದೆ. ಮಂಗಳವಾರ (ನ.9) ಅರಮನೆ ಮೈದಾನದಲ್ಲಿ ಅನ್ನ ಸಂತರ್ಪಣೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

Swathi MG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

6 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

6 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

7 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

7 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

8 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

8 hours ago