ಬೆಂಗಳೂರು: ಪಿ.ಆರ್.ಕೆ ಪ್ರೊಡಕ್ಷನ್ಸ್’ ಮೂಲಕ ನಿರ್ಮಾಣ ಆಗಿರುವ ‘O2’ ಸಿನಿಮಾ ಈಗ ಬಿಡುಗಡೆ ಸಜ್ಜಾಗಿದೆ. ಏಪ್ರಿಲ್ 19ಕ್ಕೆ ಈ ಸಿನಿಮಾ ರಾಜ್ಯಾದ್ಯಂತ ತೆರೆಕಾಣಲಿದೆ. ವಿಶೇಷ ಏನೆಂದರೆ, ಪುನೀತ್ ರಾಜ್ಕುಮಾರ್ ಅವರು ಕೇಳಿ ಇಷ್ಟಪಟ್ಟಿದ್ದ ಕೊನೆಯ ಸಿನಿಮಾ ಕಥೆ ಇದು. ಹಾಗಾಗಿ ‘O2’ ಚಿತ್ರದ ಮೇಲೆ ಎಲ್ಲರಿಗೂ ನಿರೀಕ್ಷೆ ಇದೆ.
ಪ್ರಶಾಂತ್ ರಾಜ್ ಮತ್ತು ರಾಘವ್ ನಾಯಕ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಮುಖ್ಯ ಪಾತ್ರದಲ್ಲಿ ರಾಘವ್ ನಾಯಕ್ ನಟಿಸಿದ್ದಾರೆ. ನಾಯಕಿಯಾಗಿ ಆಶಿಕಾ ರಂಗನಾಥ್ ಅಭಿನಯಿಸಿದ್ದಾರೆ. ‘ನನ್ನ ಪಾತ್ರದ ಹೆಸರು ಶ್ರದ್ಧಾ. ವೈದ್ಯೆಯ ಪಾತ್ರ ಮಾಡಿದ್ದೇನೆ. ಪಿ.ಆರ್.ಕೆ ಪ್ರೊಡಕ್ಷನ್ಸ್ ನಿರ್ಮಾಣದ ಸಿನಿಮಾದಲ್ಲಿ ನಟಿಸಿರುವುದಕ್ಕೆ ಖುಷಿಯಾಗಿದೆ’ ಎಂದು ಆಶಿಕಾ ರಂಗನಾಥ್ ಹೇಳಿದ್ದಾರೆ. ವಿವಾನ್ ರಾಧಾಕೃಷ್ಣ ಅವರು ಸಂಗೀತ ನೀಡಿದ್ದಾರೆ.