News Karnataka Kannada
Tuesday, May 07 2024
ಬೆಂಗಳೂರು

1 ರಿಂದ 8 ನೇ ತರಗತಿ ಆರಂಭ: ಸೆಪ್ಟಂಬರ್‌ನಿಂದ ಆರಂಭಿಸಲು ತೀರ್ಮಾನ

B C Nagesh Minister
Photo Credit :

ಬೆಂಗಳೂರು: ಆಗಸ್ಟ್‌ 23 ರಿಂದ 9ರಿಂದ 12ನೇ ತರಗತಿಗಳು ಆರಂಭವಾಗಲಿದೆ. ನಂತರದ ಪ್ರತಿಕ್ರಿಯೆಯನ್ನು ಆಧರಿಸಿ 1 ರಿಂದ 8 ನೇ ತರಗತಿಗಳನ್ನು ಸೆಪ್ಟಂಬರ್‌ನಿಂದ ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಗುರುವಾರ ತಿಳಿಸಿದರು.

23 ರಿಂದ ಆರಂಭವಾಗುವ ಭೌತಿಕ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಶುಕ್ರವಾರ ವಿಸ್ತೃತ ಎಸ್‌ಒಪಿ (ಪ್ರಮಾಣಿತ ಕಾರ್ಯಚರಣೆ ವಿಧಾನ) ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

1 ರಿಂದ 8 ನೇ ತರಗತಿಗಳನ್ನು ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಇದೇ 30 ರಂದು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ನಾಗೇಶ್‌ ಹೇಳಿದರು.

ತರಗತಿ ಆರಂಭಿಸಬೇಕು ಎಂಬ ಒತ್ತಡ ಪೋಷಕರಿಂದ ಬರುತ್ತಿದೆ. ತರಗತಿಗಳನ್ನು ಆರಂಭಿಸಬೇಕು ಎಂಬ ಆಲೋಚನೆ ಇದೆ. ಕೋವಿಡ್‌ನಿಂದ ಮಕ್ಕಳಿಗೆ ಹೆಚ್ಚಿನ ತೊಂದರೆ ಆಗುವುದಿಲ್ಲ ಎಂದು ಕೋವಿಡ್‌ ತಾಂತ್ರಿಕ ಸಮಿತಿ ಮತ್ತು ಮಕ್ಕಳ ತಜ್ಞರು ಹೇಳಿದ್ದಾರೆ. 9 ರಿಂದ 12 ತರಗತಿಗಳ ಪ್ರತಿಕ್ರಿಯೆ ಗಮನಿಸಲಾಗುವುದು ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು