ಬೆಂಗಳೂರು: ರಾಜ್ಯದ ರೈತರಿಗೆ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದ್ದು, ಹಾಲು ಖರೀದಿ ದರದಲ್ಲಿ ಕಡಿತಗೊಳಿಸಲಾಗಿದೆ.
ಈ ಸಂಬಂಧ ಕರ್ನಾಟಕ ಮಿಲ್ಕ್ ಫೆಡೇಷನ್ ಲಿಮಿಟೆಡ್ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, ಬಳ್ಳಾರಿ, ಕೊಪ್ಪಳ, ರಾಯಚೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಸಂಗ್ರಹಿಸುವ ಪ್ರತಿ ಲೀಟರ್ ಹಾಲಿಗೆ ಖರೀದಿ ದರವನ್ನು 1.50 ರೂ. ಕಡಿತಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇದು ಲಾಭ ಮತ್ತು ನಷ್ಟದ ಬ್ಯಾಲೆನ್ಸ್ ಶೀಟ್ ಅನ್ನು ಆಧರಿಸಿದೆ. ಹಾಲಿನ ಬೆಲೆಯನ್ನು ಹೆಚ್ಚಿಸಲು ನಮಗೆ ಸಾಧ್ಯವಾಗದ ಕಾರಣ ಖರೀದಿ ವೆಚ್ಚವನ್ನು ಕಡಿಮೆ ಮಾಡುವುದು ಅನಿವಾರ್ಯವಾಗಿತ್ತು ಎಂದಿದ್ದಾರೆ.

