ಆನೇಕಲ್ : ಜಿಗಣಿಯಲ್ಲಿ ಪಾಕಿಸ್ತಾನದ ಪ್ರಜೆಗಳ ಬಂಧನ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಮತ್ತೆ 14 ಮಂದಿಯನ್ನು ಬಂಧಿಸಲಾಗಿದೆ.

ಇತ್ತೀಚೆಗೆ ಪಾಕಿಸ್ತಾನದ ಪ್ರಜೆಯನ್ನು ಪೊಲೀಸರು ಬಂಧಿಸಿದ್ದರು. ಬಂಧನದದ ವೇಳೆ ವಿಚಾರಣೆ ನಡೆಸಿದ ಕೆಲವು ಸ್ಫೋಟಕ ಮಾಹಿತಿಗಳು ಹೊರಬಿದ್ದಿದೆ. ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆಗಳು ಅರೆಸ್ಟ್ ಆದ ಬೆನ್ನಲ್ಲೇ ಹೆಚ್ಚಿನ ತನಿಖೆಗಾಗಿ ಪೊಲೀಸರ 4 ತಂಡಗಳ ರಚನೆ ಮಾಡಿ ವಿವಿಧ ರಾಜ್ಯಗಳಿಗೆ ಕಳುಹಿಸಿಕೊಡಲಾಗಿತ್ತು.

ಈ ಬೆನ್ನಲ್ಲೇ ಜಿಗಣಿ ಪೊಲೀಸರು ಇದೀಗ ದೇಶದಾದ್ಯಂತ ಸಕ್ರಿಯರಾಗಿದ್ದ 14 ಮಂದಿ ಪಾಕಿಸ್ತಾನಿಯರನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತ ಪಾಕಿಸ್ತಾನಿ ಪ್ರಜೆಗಳ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಬಂಧಿತರೆಲ್ಲರೂ ದೇಶದ ನಾನಾ ಭಾಗಗಳಲ್ಲಿ ಅಡಗಿ ಕುಳಿತಿದ್ದರು. ಬಂಧಿತ ಪಾಕ್ ಪ್ರಜೆಗಳೆಲ್ಲ ಧರ್ಮ ಪ್ರಚಾರಕ್ಕಾಗಿ ಭಾರತಕ್ಕೆ ನುಸುಳಿದ್ದಲ್ಲದೆ, ವಿವಿಧ ರಾಜ್ಯಗಳಲ್ಲಿ ಬೀಡುಬಿಟ್ಟಿದ್ದರು ಎನ್ನಲಾಗಿದೆ.