ಬೆಂಗಳೂರು

15 ಕೋಟಿ ವಿದ್ಯುತ್‌ ಬಿಲ್‌  ಬಾಕಿ: ಕುಡಿಯುವ ನೀರು, ಬೀದಿ ದೀಪಗಳ ವಿದ್ಯುತ್‌ ಸಂಪರ್ಕ ಕಡಿತಗೊಳಿಸುವಂತೆ ಬೆಸ್ಕಾಂ ಆದೇಶ

ಕೆಂಗೇರಿ (ನ.09) : ಸುಮಾರು 15 ಕೋಟಿ ರು. ವಿದ್ಯುತ್‌ ಬಿಲ್‌  ಬಾಕಿ ಉಳಿಸಿಕೊಂಡಿರುವ ಪರಿಣಾಮ ಯಶವಂತಪುರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ 13 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಾರ್ವಜನಿಕ ಕುಡಿಯುವ ನೀರಿನ ಸಂಪರ್ಕ ಹಾಗೂ ಬೀದಿ ದೀಪಗಳು  ಬಂದ್‌ ಆಗುವ ಸಾಧ್ಯತೆಯಿದೆ.
ಏಕೆಂದರೆ, ಈ ಗ್ರಾಮ ಪಂಚಾಯಿತಿಗಳು ಬೆಸ್ಕಾಂಗೆ ಕುಡಿಯುವ ನೀರು ಹಾಗೂ ಬೀದಿ ದೀಪಗಳ ವಿದ್ಯುತ್‌ ಶುಲ್ಕ ಪಾವತಿ ಮಾಡದೆ 14.60 ರು. ಕೋಟಿ ಬಾಕಿ ಉಳಿಸಿಕೊಂಡಿದ್ದು, ಕೂಡಲೇ ಕುಡಿಯುವ ನೀರು, ಬೀದಿ ದೀಪಗಳ ವಿದ್ಯುತ್‌ ಸಂಪರ್ಕ ಕಡಿತಗೊಳಿಸುವಂತೆ ಬೆಸ್ಕಾಂ ಆದೇಶ ಮಾಡಿದೆ.

ಬೆಸ್ಕಾಂ ಕೆಂಗೇರಿ  ವಿಭಾಗದ ಕೆ-1, ಕೆ-3, ಕೆ-4 ಉಪ ವಿಭಾಗಗಳ ವ್ಯಾಪ್ತಿಯಲ್ಲಿನ ಗ್ರಾಪಂಗಳು ಭಾರಿ ಮೊತ್ತವನ್ನು ಬಾಕಿ ಉಳಿಸಿಕೊಂಡಿವೆ. ಕೆ-1 ಉಪ ವಿಭಾಗದ ಸುಲಿಕೆರೆ ಗ್ರಾಪಂ, ಎಚ್‌.ಗೊಲ್ಲಹಳ್ಳಿ, ಕುಂಬಳಗೋಡು, ಕೆ.ಗೊಲ್ಲಹಳ್ಳಿ, ರಾಮೋಹಳ್ಳಿ ಗ್ರಾಪಂಗಳಿಂದ ಬರೋಬ್ಬರಿ ರು. 9.5 ಕೋಟಿ ಪಾವತಿಯಾಗಬೇಕಿದೆ. ಇನ್ನು ಕೆ-3 ಉಪ ವಿಭಾಗದ ಕಗ್ಗಲಿಪುರ, ಸೋಮನಹಳ್ಳಿ, ಅಗರ, ತರಳು, ನೆಲಗುಳಿ, ಕಗ್ಗಲಹಳ್ಳಿ ಹಾಗೂ ದೇವಸಂದ್ರ ಗ್ರಾಪಂಗಳಿಂದ ರು.2.5 ಕೋಟಿ ಬಾಕಿ ಇದೆ. ಕೆ-4 ಉಪ ವಿಭಾಗದ ಕೊಡಗಹಳ್ಳಿ ಗ್ರಾಪಂನಿಂದ ರು.2.60 ಕೋಟಿ ಬಾಕಿ ಇದೆ ಎಂದು ಕೆಂಗೇರಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ ಟಿ.ಶ್ರೀಕಾಂತ್‌ ತಿಳಿಸಿದ್ದಾರೆ.

13 ಗ್ರಾಪಂಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಲವು ಬಾರಿ ಪತ್ರ ಬರೆದು ಕುಡಿಯುವ ನೀರು ಹಾಗೂ ಬೀದಿ ದೀಪಗಳ ವಿದ್ಯುತ್‌ ಶುಲ್ಕ ಪಾವತಿಗೆ ಮನವಿ ಮಾಡಲಾಗಿದೆ. ಆದರೂ ಪಂಚಾಯಿತಿಗಳು ಕ್ರಮ ಕೈಗೊಂಡಿಲ್ಲ. ಹೀಗಾಗಿ ವಿದ್ಯುತ್‌ ಸಂಪರ್ಕ ಕಡಿತಕ್ಕೆ ಆದೇಶ ಮಾಡಲಾಗಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾದರೆ ಗ್ರಾಮ ಪಂಚಾಯಿತಿಗಳು ಕಾರಣವೇ ಹೊರತು ಬೆಸ್ಕಾಂ ಅಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಅಟ್ಟಾಡಿಸಿ ಹೊಡೆದ ಗ್ರಾಮಸ್ಥರು :

ತುಮಕೂರು : ವಿದ್ಯುತ್ ಬಿಲ್ ವಸೂಲಿಗಾಗಿ ತೆರಳಿದ್ದ ಬೆಸ್ಕಾ ಸಿಬ್ಬಂದಿಗೆ ಅಟ್ಟಾಡಿಸಿ ಕಲ್ಲು, ದೊಣ್ಣೆಗಳಿಂದ ಹೊಡೆದ ಘಟನೆ ತುಮಕೂರು ಜಿಲ್ಲೆ, ಶಿರಾ ತಾಲೂಕಿನ ಚಿಕ್ಕನಕೋಟೆ ಗೊಲ್ಲರಹಟ್ಟಿಯಲ್ಲಿ ನಡೆದಿತ್ತು.

ವಿದ್ಯುತ್ ಬಿಲ್ ವಸೂಲಿಗಾಗಿ ಶಾಖಾಧಿಕಾರಿ ತೆರಳಿದ್ದರು. ಈ ವೇಳೆ ಗ್ರಾಮಸ್ಥರು ಕಲ್ಲು ದೊಣ್ಣೆಗಳಿಂದ ಹಲ್ಲೆ (Assault ) ನಡೆಸಿದ್ದರು. ಗ್ರಾಮಸ್ಥರು ಹಲ್ಲೆ ನಡೆಸಿರುವ ವಿಡಿಯೋ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಇದೀಗ ಅದು ಎಲ್ಲೆಡೆ (Video) ವೈರಲ್‌ ಆಗಿತ್ತು.

ಮೊಬೈಲ್​ನಲ್ಲಿ ಸೆರೆಯಾಗಿದೆ. ಲೈನ್ ಮ್ಯಾನ್​ಗಳಾದ ಭೂತರಾಜು, ನರಸಿಂಹರಾಜು, ತಿಪ್ಪೇಸ್ವಾಮಿ ಎಂಬುವರ ಮೇಲೆಯೂ ಹಲ್ಲೆ ನಡೆಸಿದ್ದು, ಶಾಖಾಧಿಕಾರಿ ರಾಜಣ್ಣಗೆ ಗಂಭೀರ ಗಾಯವಾಗಿದೆ. ಸದ್ಯ ಗಾಯಾಳುಗಳೆಲ್ಲರನ್ನೂ ಶಿರಾ ಆಸ್ಪತ್ರೆಗೆ ದಾಖಲಿಸಲಾಗಿತ್ತು

ಈ ಘಟನೆಯ ಹಿಂದಿನ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೂಡ ನಡೆಸಲಾಗಿತ್ತು.

 

Gayathri SG

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

8 seconds ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

23 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

39 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

1 hour ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago