ದೊಡ್ಡಬಳ್ಳಾಪುರ: ಎಟಿಎಂನಿಂದ 15 ಲಕ್ಷ ರೂ. ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಗ್ಯಾಸ್ ಕಟರ್ ಬಳಸಿ ಎಸ್‌ಬಿಐ ಎಟಿಎಂನಿಂದ ಹಣ ಕದಿಯಲಾಗಿದೆ. ಶನಿವಾರ ತಡರಾತ್ರಿ 2 ಗಂಟೆ ವೇಳೆ ಗ್ಯಾಸ್ ಕಟರ್‌ನಿಂದ ಎಟಿಎಂ ಕಟ್ ಮಾಡಿರುವ ಖದೀಮರು, 15 ಲಕ್ಷ ರೂಪಾಯಿ ದೋಚಿ ಪರಾರಿಯಾಗಿದ್ದಾರೆ.
ಸಿಸಿಟಿವಿ ಕಣ್ಣಿಂದ ತಪ್ಪಿಸಿಕೊಳ್ಳಲು ಅದಕ್ಕೆ ಬ್ಲಾಕ್ ಸ್ಪ್ರೇಯನ್ನು ಕಳ್ಳರು ಹೊಡೆದಿದ್ದಾರೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

