Ad

ಗ್ಯಾಸ್ ಕಟರ್ ಬಳಸಿ ಎಟಿಎಂನಿಂದ 15 ಲಕ್ಷ ರೂ. ಕಳ್ಳತನ

ಎಟಿಎಂನಿಂದ 15 ಲಕ್ಷ ರೂ. ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ದೊಡ್ಡಬಳ್ಳಾಪುರ: ಎಟಿಎಂನಿಂದ 15 ಲಕ್ಷ ರೂ. ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

Ad
300x250 2

ಗ್ಯಾಸ್ ಕಟರ್ ಬಳಸಿ ಎಸ್‌ಬಿಐ ಎಟಿಎಂನಿಂದ  ಹಣ ಕದಿಯಲಾಗಿದೆ. ಶನಿವಾರ ತಡರಾತ್ರಿ 2 ಗಂಟೆ ವೇಳೆ ಗ್ಯಾಸ್ ಕಟರ್‌ನಿಂದ ಎಟಿಎಂ ಕಟ್ ಮಾಡಿರುವ ಖದೀಮರು, 15 ಲಕ್ಷ ರೂಪಾಯಿ ದೋಚಿ ಪರಾರಿಯಾಗಿದ್ದಾರೆ.

ಸಿಸಿಟಿವಿ ಕಣ್ಣಿಂದ ತಪ್ಪಿಸಿಕೊಳ್ಳಲು ಅದಕ್ಕೆ ಬ್ಲಾಕ್ ಸ್ಪ್ರೇಯನ್ನು ಕಳ್ಳರು ಹೊಡೆದಿದ್ದಾರೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad
Ad
Nk Channel Final 21 09 2023
Ad