News Karnataka Kannada
Sunday, May 05 2024
ಬೆಂಗಳೂರು

17ರಂದು ಯುವ ಕಾಂಗ್ರೆಸ್‌ನಿಂದ ರಾಷ್ಟ್ರೀಯ ನಿರುದ್ಯೋಗ ದಿನ

Raksha 14092021
Photo Credit :

ಬೆಂಗಳೂರು: ತಕ್ಷಣ ಉದ್ಯೋಗ ಒದಗಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಲು ಇದೇ 17ರಂದು ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಲಾಗುವುದು ಎಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‌ದೇಶದಲ್ಲಿ ನಿರುದ್ಯೋಗ ಸಮಸ್ಯೆ ಗಂಭೀರವಾಗಿದೆ. ಯುವ ಜನರ ಆಕ್ರೋಶವನ್ನು ಪ್ರಧಾನಿವರೆಗೆ ತಲುಪಿಸಲು ಅಂದು ವ್ಯಾಪಕ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.

ಅಂದು ಯುವಜನರು, ಯುವ ಕಾರ್ಯಕರ್ತರು ಟ್ವಿಟರ್ ಹಾಗೂ ಇತರೆ ಸಾಮಾಜಿಕ ಜಾಲತಾಣದ ತಮ್ಮ ಖಾತೆಗಳ ಮೂಲಕ ಉದ್ಯೋಗ ನೀಡುವಂತೆ ಪ್ರಧಾನಿ ಮೋದಿ ಅವರನ್ನು ಒತ್ತಾಯಿಸಬೇಕು ಎಂದೂ ಮನವಿ ಮಾಡಿದರು.

ರಾಜ್ಯದಲ್ಲಿ ಒಂದೂವರೆ ವರ್ಷದಿಂದ 40 ಲಕ್ಷಕ್ಕೂ ಹೆಚ್ಚು ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಕೆಲವರಿಗೆ ವೇತನ ಕಡಿತವಾಗಿದೆ. ಗಾರ್ಮೆಂಟ್ಸ್‌ ನೌಕರರು, ಚಾಲಕರು, ಅಸಂಘಟಿತ ಕಾರ್ಮಿಕರು ಹೀಗೆ ಲೆಕ್ಕವಿಲ್ಲದಷ್ಟು ಜನ ಉದ್ಯೋಗ ಕಳೆದುಕೊಂಡು ಕಣ್ಣೀರಿನಲ್ಲಿ ಮುಳುಗಿದ್ದಾರೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು