ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆ ನಗರದ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹೀಗಾಗಿ ನಿಷೇಧಾಜ್ಞೆ ಹಿನ್ನಲೆಯಲ್ಲಿ ಮದ್ಯ ಮಾರಾಟಕ್ಕೂ ನಿರ್ಬಂಧ ವಿಧಿಸಲಾಗಿದೆ.
ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದು, ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಏಪ್ರಿಲ್.24ರ ಸಂಜೆ 6 ಗಂಟೆಯಿಂದ ಏಪ್ರಿಲ್.26ರ ರಾತ್ರಿ 12 ಗಂಟೆಯವರೆಗೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.