News Karnataka Kannada
Friday, May 03 2024
ಬೆಂಗಳೂರು

ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗ 20 ವರ್ಷ ಜೈಲು..

ಮನೆಯಲ್ಲಿ ಒಬ್ಬಂಟಿಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ ನ್ಯಾಯಾಲಯವು 20 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಡವನ್ನು ವಿಧಿಸಿ, ಆದೇಶವನ್ನು ಹೊರಡಿಸಿದೆ.
Photo Credit : NewsKarnataka

ಬೆಂಗಳೂರು : ಮನೆಯಲ್ಲಿ ಒಬ್ಬಂಟಿಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ ನ್ಯಾಯಾಲಯವು 20 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಡವನ್ನು ವಿಧಿಸಿ, ಆದೇಶವನ್ನು ಹೊರಡಿಸಿದೆ.

ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. 2022ರ ಜನವರಿ 22ರಂದು ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಒಬ್ಬಂಟಿಯಾಗಿದ್ದ 8 ವರ್ಷದ ಬಾಲಕಿ ಮೇಲೆ ಪಕ್ಕದ ಮನೆಯವನೇ ಲೈಂಗಿಕ ದೌರ್ಜನ್ಯವೆಸಗಿದ್ದ.

ಈ ಸಂಬಂಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿ ಸೂಕ್ತ ಸಾಕ್ಷ್ಯಾಧಾರಗಳನ್ನು ನ್ಯಾಯಾಲಯಕ್ಕೆ ಒದಗಿಸಲಾಗಿತ್ತು. ವಾದ ಆಲಿಸಿದ ನ್ಯಾಯಾಲಯವು 2024ರ ಏಪ್ರಿಲ್ 2ರಂದು ತೀರ್ಪು ಪ್ರಕಟಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು