News Karnataka Kannada
Sunday, May 12 2024
ಬೆಂಗಳೂರು

ತಂಬಾಕು ಉತ್ಪನ್ನ ಖರೀದಿಗೆ 21 ವರ್ಷ ಆಗ್ಲೇಬೇಕು, ರಾಜ್ಯದಲ್ಲಿ ಹುಕ್ಕಾಬಾರ್‌ ಬಂದ್‌ ಗೆ ನಿರ್ಧಾರ

Dinesh Gundurao
Photo Credit : News Kannada

ಬೆಂಗಳೂರು: ಕೋಟ್ಪಾ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ 21 ವರ್ಷದವರೆಗೆ ಮಿತಿಯನ್ನು ಹೆಚ್ಚಳ ಮಾಡಲಾಗುವುದು. ಈ ಮೂಲಕ 21 ವರ್ಷದೊಳಗಿನವರಿಗೆ ತಂಬಾಕು ಉತ್ಪನ್ನಗಳ ಖರೀದಿಗೆ ನಿಷೇಧ ಹೇರಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.
ಬೆಂಗಳೂರಿನ ವಿಕಾಸ ಸೌಧದಲ್ಲಿ ನಡೆದ ಸಭೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಇತರ ತಂಬಾಕು ಉತ್ಪನ್ನಗಳ ನಿಷೇಧಿಸುವ ಬಗ್ಗೆ ಚರ್ಚಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ತಂಬಾಕು ಖರೀದಿಗೆ 18 ವರ್ಷದ ಮೇಲ್ಪಟ್ಟವರಿಗೆ, ಕಾನೂನನಲ್ಲಿ ಇದ್ದ ಅವಕಾಶವನ್ನ ಪರಿಷ್ಕರಿಸಲಾಗುತ್ತದೆ. ಈಗ 18 ವರ್ಷದ ಬದಲು 21 ವರ್ಷದ ಮೇಲ್ಪಟ್ಟವರು ಎಂದು ಕೋಟ್ಪಾ ಕಾಯ್ದೆಗೆ ತಿದ್ದುಪಡಿ ತರಲಾಗುವುದು. ಈ ಮೂಲಕ 21 ವರ್ಷದ ಒಳಗಿನವರಿಗೆ ತಂಬಾಕು ಉತ್ಪನ್ನಗಳ ಖರೀದಿಗೆ ನಿಷೇಧ ಹೇರಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಸೇವೆನೆಯನ್ನ ಶಾಲೆಗಳ ಜೊತೆಗೆ, ದೇವಸ್ಥಾನಗಳು, ಆಸ್ಪತ್ರೆಗಳ ಸುತ್ತ ಮುತ್ತಲು ನಿಷೇಧಿಸುವುದಾಗಿ ತಿಳಿಸಿದರು. ಈ ನಿಟ್ಟಿನಲ್ಲಿ ಕೋಟ್ಪಾ ಕಾಯ್ದೆಗೆ ತಿದ್ದುಪಡಿಗೆ ತರಲಾಗುವುದು. ಈ ಹಿಂದಿನ ಕೋಟ್ಪಾ ಕಾಯ್ದೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವನೆಯನ್ನ ನಿಷೇಧಿಸಲಾಗಿತ್ತು. ಸಿಗರೇಟ್ ಜೊತೆಗೆ ಇತರ ತಂಬಾಕು ಉತ್ಪನ್ನಗಳ ಸೇವನೆ ಮತ್ತು ಮಾರಾಟವನ್ನ ನಿಷೇಧಿಸುವ ನಿಟ್ಟಿನಲ್ಲಿ ಕೋಟ್ಪಾ ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ ಎಂದರು.

ರಾಜ್ಯದ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಹುಕ್ಕಾ ಬಾರ್ ಗಳಿಗೆ ಯುವಕರು ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಇದರಿಂದ ಯುವಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ.‌ ಈ ಹಿನ್ನೆಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಹುಕ್ಕಾ ಬಾರ್ ಗಳಲ್ಲಿ ಮಾದಕ ವಸ್ತುಗಳ ಸೇವನೆಯನ್ನ ನಿಷೇಧಿಸಲು ಕ್ರಮ ಕೈಗೊಳ್ಳಲಾಗುವುದು. ಹುಕ್ಕಾ ಬಾರ್ ಗಳಿಗೆ ನಿಯಂತ್ರಣ ಹೇರುವಲ್ಲಿ ಕ್ರೀಡಾ ಸಚಿವ ನಾಗೇಂದ್ರ ಅವರು ಕೆಲವು ಸಲಹೆ ನೀಡಿದ್ದು, ಕೋಟ್ಪಾ ಕಾಯ್ದೆ ತಿದ್ದುಪಡಿಯಲ್ಲಿ ಹುಕ್ಕಾ ಬಾರ್ ಗಳಲ್ಲಿ ನಡೆಯುವ ಮಾದಕ ವಸ್ತುಗಳ ಸೇವನೆಗೆ ನಿಷೇಧ ಹೇರಲಾಗುವುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು