ಬೆಂಗಳೂರು: ರಾಜ್ಯದಲ್ಲಿ ಇಲ್ಲಿಯವರೆಗೂ 21,186 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.
ರಾಜ್ಯದಲ್ಲಿ 1643 ಪ್ರಕರಣಗಳು ಸಕ್ರಿಯವಾಗಿವೆ. ಕಳೆದ 24 ಗಂಟೆಯಲ್ಲಿ 202 ಮಂದಿಯಲ್ಲಿ ಡೆಂಗ್ಯೂ ದೃಢಪಟ್ಟಿದೆ. ಇಲ್ಲಿಯವರೆಗೆ ಈ ಜ್ವರಕ್ಕೆ 10 ಮಂದಿ ಬಲಿಯಾಗಿದ್ದಾರೆ.
ಕಳೆದ 24 ಗಂಟೆಯಲ್ಲಿ ಒಂದು ವರ್ಷದೊಳಗಿನ 7 ಮಕ್ಕಳಲ್ಲಿ, ಒಂದು ವರ್ಷದೊಳಗಿನ 401 ಮಕ್ಕಳಲ್ಲಿ, ಕಳೆದ 24 ಗಂಟೆಯಲ್ಲಿ ಒಂದು ವರ್ಷದಿಂದ 18 ವರ್ಷದೊಳಗಿನ 69 ಮಂದಿಯಲ್ಲಿ ಡೆಂಗ್ಯೂ ಪತ್ತೆಯಾಗಿದೆ.
ಇಲ್ಲಿಯವರೆಗೂ ಒಂದು ವರ್ಷದಿಂದ 18 ವರ್ಷದೊಳಗಿನ 7516 ಮಂದಿಯಲ್ಲಿ, ಕಳೆದ 24 ಗಂಟೆಯಲ್ಲಿ 18 ವರ್ಷ ಮೇಲ್ಪಟ್ಟ 126 ಜನರಲ್ಲಿ, ಇಲ್ಲಿಯವರೆಗೂ 18 ವರ್ಷ ಮೇಲ್ಪಟ್ಟ 13269 ಮಂದಿಯಲ್ಲಿ ಡೆಂಗ್ಯೂ ಪ್ರಕರಣ ದೃಢಪಟ್ಟಿದೆ.

