ಬೆಂಗಳೂರು: ಎನ್ಡಿಎ ಅವಧಿಯಲ್ಲಿ 2,95,817 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ರಾಜ್ಯಕ್ಕೆ ಕೇಂದ್ರದಿಂದ ಅನ್ಯಾಯ ಮಾಡಲಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಇಂದು ಸುದ್ದಿಗೋಷ್ಠಿ ನಡೆಸಿ ಕೇಂದ್ರದಿಂದ ರಾಜ್ಯಕ್ಕೆ ಬಂದ ಅನುದಾನಗಳ ವಿವರ ನೀಡಿ ಕರ್ನಾಟಕದ ವಿಚಾರದಲ್ಲಿ ಸಾಕಷ್ಟು ತಪ್ಪು ಮಾಹಿತಿ ಹರಿಯಬಿಡಲಾಗುತ್ತಿದೆ ಎಂದು ತಿಳಿಸಿದರು.
ಯುಪಿಎ ಅವಧಿಯಲ್ಲಿ ವಿವಿಧ ಇಲಾಖೆಗಳಲ್ಲಿ ಅನುದಾನ ಹಂಚಿಕೆ 66 ಸಾವಿರ ಕೋಟಿ ರೂ.ಇದ್ದರೆ 2024 ರ ಒಂದೇ ವರ್ಷದಲ್ಲಿ ಎನ್ಡಿಎಯಿಂದ 45,485 ಕೋಟಿ ರೂ. ತೆರಿಗೆ ಹಂಚಿಕೆ ಮಾಡಲಾಗಿದೆ.
ಯುಪಿಎ ಅವಧಿಯಲ್ಲಿ 60,779 ಕೋಟಿ ರೂ. ತೆರಿಗೆ ಹಂಚಿಕೆಯಾಗಿದ್ದರೆ ಎನ್ಡಿಎ ಅವಧಿಯಲ್ಲಿ 2,36,955 ಕೋಟಿ ರೂ. ತೆರಿಗೆ ಹಂಚಿಕೆ ಮಾಡಲಾಗಿದೆ. ಇಷ್ಟಾದರೂ ಕರ್ನಾಟಕಕ್ಕೆ ಅನ್ಯಾಯ ಆಗಿದೆ ಎಂದು ತಪ್ಪು ಪ್ರಚಾರ ಮಾಡಲಾಗುತ್ತಿದೆ ಎಂದು ದೂರಿದರು.

