ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಬರೋಬ್ಬರಿ 34 ಮಂದಿ ಬಾಂಗ್ಲಾ ಅಕ್ರಮ ವಲಸಿಗರನ್ನು ಪತ್ತೆ ಮಾಡಿರುವ ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ಬಾಂಗ್ಲಾ ವಲಸಿಗರ ವಿರುದ್ಧ ಸರಣಿ ಕಾರ್ಯಾಚರಣೆ ನಡೆಸಿದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಈ 34 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ 1 ವಾರದಲ್ಲಿ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಪರಿಶೀಲನೆ ನಡೆಸಿದಾಗ 34 ಮಂದಿ ಅಕ್ರಮವಾಗಿ ನೆಲೆಸಿರುವುದು ಪತ್ತೆಯಾಗಿದೆ.

ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 7, ಹೆಬ್ಬಗೋಡಿ ವ್ಯಾಪ್ತಿಯಲ್ಲಿ 16, ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 10 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.