ಬೆಂಗಳೂರು: ಆಟೋಮೊಬೈಲ್ ಇಂಡಸ್ಟ್ರಿ ಹೆಚ್ಚಿನ ಆದಾಯ ನೀಡುತ್ತಿದೆ. 7ನೇ ಸ್ಥಾನದಲ್ಲಿ ಆಟೋಮೊಬೈಲ್ ಇಂಡಸ್ಟ್ರಿ ಇತ್ತು. ಈಗ ನಾವು ಜಪಾನ್ ಮೀರಿಸಿ 3ನೇ ಸ್ಥಾನಕ್ಕೆ ಬಂದಿದ್ದೇವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದರು.
ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಆಟೋಮೊಬೈಲ್ ಕ್ಷೇತ್ರದಲ್ಲಿ ಮುಂದಿನ 5 ವರ್ಷದಲ್ಲಿ ಮೊದಲ ಸ್ಥಾನಕ್ಕೆ ಬರುತ್ತೇವೆ. ಮರ್ಸಿಡಿಸ್ ಎಲೆಕ್ಟ್ರಿಕ್ ಕಾರು ಉತ್ಪಾದನೆ ಇಲ್ಲಿ ಆಗಲಿದೆ. ಹೈಡ್ರೋಜನ್, ಎಥೆನಾಲ್ನಲ್ಲಿ ಓಡುವ ಗಾಡಿ ಇದೆ.
ಈಗ ಇಡೀ ದೇಶದಲ್ಲಿ ಎಲೆಕ್ಟ್ರಿಕ್ ವಾಹನ ಓಡಲಿದೆ. ಡೀಸೆಲ್ ಬಸ್ಗಿಂತ 30% ಕಡಿಮೆ ಟಿಕೆಟ್ ದರದ ಎಲೆಕ್ಕ್ಟ್ರಿಕ್ ಬಸ್ ಸಿದ್ಧವಾಗುತ್ತಿದೆ ಎಂದು ಹೇಳಿದರು.
ಭಾರತದ ಸಾಫ್ಟ್ವೇರ್ ಹುಡುಗರಲ್ಲಿ ಮೆತಮೆಟಿಕ್ ಜೀನ್ ಇದೆಯಾ ಎಂದು ಜಪಾನ್ ಪ್ರಧಾನಿ ಕೇಳುತ್ತಿದ್ದರು. ಅಷ್ಟು ಪ್ರಭಾವಿಯಾಗಿದೆ ನಮ್ಮ ಭಾರತ ಎಂದರು.

