Bengaluru 22°C
Ad

ಬಿಜೆಪಿ ವಿರುದ್ಧ 40% ಭ್ರಷ್ಟಾಚಾರ ಆರೋಪ: ಸಿಎಂ, ಡಿಸಿಎಂಗೆ ಜಾಮೀನು 

ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ತಲುಪಿಲ್ಲ. ಗ್ಯಾರಂಟಿ ಯೋಜನೆಗಳ ಜನಪ್ರಿಯತೆಯ ಮಧ್ಯೆಯೂ ನಿರೀಕ್ಷಿತ ಗುರಿ ಮುಟ್ಟುವುದು ಸಾಧ್ಯವಾಗಿಲ್ಲ. ಹೀಗಾಗಿ ರಾಜ್ಯ ನಾಯಕತ್ವದಲ್ಲಿ ಬದಲಾವಣೆ ಕೂಗು ಕೇಳಿಬರುತ್ತಿದೆ.

ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ  ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್  ಜಾಮೀನು ಮಂಜೂರಾಗಿದೆ.

Ad

40% ಭ್ರಷ್ಟಾಚಾರ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ್ದಕ್ಕೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಮಾನನಷ್ಟ ಮೊಕದ್ದಮೆ ಹೂಡಿತ್ತು.  ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

Ad

ಕಾಂಗ್ರೆಸ್ ವಿರುದ್ಧ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಕೇಶವ್ ಪ್ರಸಾದ್ ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ಸಿಎಂ, ಡಿಸಿಎಂಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ ಆಗಿತ್ತು.

Ad

ಸಿಎಂ ಮತ್ತು ಡಿಸಿಎಂ  ಪರವಾಗಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಹಮ್ಮದ್ ಹಾಜರಿದ್ದರು. ಬಿಜೆಪಿ ಪರವಾಗಿ ವಕೀಲ ವಿನೋದ್ ಕುಮಾರ್ ಹಾಜರಾಗಿದ್ದರು.

Ad
Ad
Ad
Nk Channel Final 21 09 2023