News Karnataka Kannada
Sunday, May 05 2024
ಬೆಂಗಳೂರು

5 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು-ಬಿ.ಸಿ. ನಾಗೇಶ್

B C Nagesh Minister
Photo Credit :

ಕಲಬುರ್ಗಿ: ಈ ಬಾರಿ 5 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.ಶಿಕ್ಷಕರ ಹುದ್ದೆ ನೇಮಕಾತಿ ಪರೀಕ್ಷೆ ಬರೆಯುವವರು ಅರ್ಹತೆ ಗಳಿಸಲು ಶಿಕ್ಷಕರ ಅರ್ಹತಾ ಪರೀಕ್ಷೆ ಪಾಸಾಗಿರಬೇಕು.

ಕಲಬುರ್ಗಿಯ ವಿವಿಧ ಶಾಲೆಗಳಿಗೆ ಭೇಟಿ ನೀಡಿದ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿ, ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ ಈ ಬಾರಿ ಎರಡರಿಂದ ಮೂರು ಸಲ ಶಿಕ್ಷಕರ ನೇಮಕಾತಿ ಪರೀಕ್ಷೆ ನಡೆಸಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಈ ಹಿಂದೆ 10 ಸಾವಿರ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದ ಸಂದರ್ಭದಲ್ಲಿ ಕೇವಲ 2500 ಜನರು ಮಾತ್ರ ಪಾಸಾಗಿದ್ದರು. ಈ ಬಾರಿ 5000 ಶಿಕ್ಷಕರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಇದಕ್ಕಾಗಿ ಎರಡರಿಂದ ಮೂರು ಬಾರಿ ನೇಮಕಾತಿ ಪರೀಕ್ಷೆ ನಡೆಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು