Bengaluru 22°C
Ad

ಇಂದಿನಿಂದ 5 ದಿನ ರಾಜ್ಯದೆಲ್ಲೆಡೆ ಭಾರೀ ಮಳೆಯಾಗುವ ಸಾಧ್ಯತೆ

ಇಂದಿನಿಂದ ಜೂನ್ 30ರ ವರೆಗೆ ಐದು ದಿನಗಳ ಕಾಲ ರಾಜ್ಯದೆಲ್ಲೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

ಬೆಂಗಳೂರು: ಇಂದಿನಿಂದ ಜೂನ್ 30ರ ವರೆಗೆ ಐದು ದಿನಗಳ ಕಾಲ ರಾಜ್ಯದೆಲ್ಲೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದು ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಹಾಗೂ ಉತ್ತರ ಒಳನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಅನ್ನು ಘೋಷಿಸಲಾಗಿದೆ.

Ad
300x250 2

ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಮಂಡ್ಯ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರದಲ್ಲಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ಇನ್ನು ಕೋಟೆ, ಗದಗ, ಬೀದರ್, ರಾಯಚೂರು, ಬಳ್ಳಾರಿ ಹಾಗೂ ಯಾದಗಿರಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಲ್ಲೂ ಮುಂದಿನ ಮೂರು ದಿನಗಳ ಕಾಲ ಮಳೆ ಸಾಧ್ಯತೆ ಇದೆ. ಇಂದಿನಿಂದ ಜೂನ್ 29ರ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಸದ್ಯ ನಗರದಲ್ಲೆಡೆ ಮೋಡ ಕವಿದ ವಾತಾವರಣವಿದ್ದು, ಮುಂಜಾನೆಯಿಂದಲೇ ನಗರದ ಕೆಲವು ಭಾಗದಲ್ಲಿ ತುಂತುರು ಮಳೆಯಾಗಿದೆ. ಇದೇ ರೀತಿ ಮುಂದಿನ ಮೂರು ದಿನಗಳ ಕಾಲ ವಾತಾವರಣ ಇರುವ ಸಾಧ್ಯತೆಗಳಿವೆ.

Ad
Ad
Nk Channel Final 21 09 2023
Ad