News Karnataka Kannada
Wednesday, April 17 2024
Cricket
ಬೆಂಗಳೂರು

ಕರ್ನಾಟಕ ಬಜೆಟ್: ವಕ್ಫ್ ಆಸ್ತಿ ರಕ್ಷಣೆ, ಅಭಿವೃದ್ಧಿಗೆ 50 ಕೋಟಿ ಘೋಷಣೆ

waqf property protection
Photo Credit : Twitter

ಬೆಂಗಳೂರು: ರಾಜ್ಯದಲ್ಲಿರುವ 40 ಸಾವಿರಕ್ಕೂ ಅಧಿಕ ವಕ್ಫ್ ಆಸ್ತಿಗಳ ರಕ್ಷಣೆ ಹಾಗೂ ಅಭಿವೃದ್ಧಿಗೆ 50 ಕೋಟಿ ರೂ. ಹಣವನ್ನು ಸಿದ್ದರಾಮಯ್ಯ ಬಜೆಟ್‍ನಲ್ಲಿ ಮೀಸಲಿಟ್ಟಿದ್ದಾರೆ.

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು (1 ರಿಂದ 8ನೇ ತರಗತಿಯವರೆಗೆ) ಕೇಂದ್ರ ಸರ್ಕಾರವು ಸ್ಥಗಿತಗೊಳಿಸಿರುತ್ತದೆ. ಇದರಿಂದ ಅಲ್ಪಸಂಖ್ಯಾತ ಸಮುದಾಯದ ಬಡ ವಿದ್ಯಾರ್ಥಿಗಳಿಗೆ ತೊಂದರೆಯಾಗಿರುವುದನ್ನು ಮನಗಂಡು ಈ ಯೋಜನೆಯನ್ನು ಮುಂದುವರಿಸಲು 60 ಕೋಟಿ ರೂ. ಅನುದಾನವನ್ನು ಒದಗಿಸಲಿದೆ ಎಂದು ಸಿಎಂ ಹೇಳಿದರು.

ಅಲ್ಪಸಂಖ್ಯಾತರ ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದಿಂದಲೇ ನೀಟ್, ಜೆಇಇ, ಸಿಇಟಿ ಹಾಗೂ ಇತರೆ ಪ್ರವೇಶ ಪರೀಕ್ಷೆಗಳ ತಯಾರಿಗಾಗಿ ಪ್ರತಿಷ್ಠಿತ ಸಂಸ್ಥೆಗಳಿಂದ 2 ವರ್ಷಗಳ ತರಬೇತಿಯನ್ನು ನೀಡಲು 8 ಕೋಟಿ ರೂ. ಗಳ ಅನುದಾನ ನೀಡುವುದಾಗಿ ಸಿದ್ದರಾಮಯ್ಯ ಘೋಷಣೆ ಮಾಡಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು