Ad

ಇನ್ಮುಂದೆ ಎಲ್ಲೆಂದರಲ್ಲಿ ಕಸ ಬಿಸಾಡಿದರೆ 500 ರೂ. ದಂಡ!

ಸಿಲಿಕಾನ್ ಸಿಟಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಗ್ಯಾರಂಟಿ ಸರ್ಕಾರದಿಂದ ಮತ್ತೊಂದು ದಂಡ ಪ್ರಯೋಗ ಮಾಡಲಾಗಿದೆ.

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಗ್ಯಾರಂಟಿ ಸರ್ಕಾರದಿಂದ ಮತ್ತೊಂದು ದಂಡ ಪ್ರಯೋಗ ಮಾಡಲಾಗಿದೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ಎಲ್ಲೆಂದರಲ್ಲಿ ಕಸ ಬಿಸಾಡುವವರಿಗೆ ದಂಡ ಪ್ರಯೋಗ ಮಾಡಲಾಗುತ್ತದೆ.

Ad
300x250 2

ಎಲ್ಲೆಂದರಲ್ಲಿ ಕಸ ಮತ್ತು ಸ್ವಚ್ಛತೆ ಕಾಪಾಡದವರಿಗೆ ದಂಡದ ಮೊತ್ತ 50 ರೂ. ನಿಂದ 500 ರೂ. ವರೆಗೆ ಏರಿಕೆ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು. ಈ ಕುರಿತು ಆರೋಗ್ಯ ಇಲಾಖೆ ಸದ್ಯದಲ್ಲೇ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಿಗೂ ಆದೇಶ ಹೊರಡಿಸಲಿದೆ. ನಿನ್ನೆ ಆರೋಗ್ಯ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದರು.

Ad
Ad
Nk Channel Final 21 09 2023
Ad