77 ನೇ ಗಣರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಮಾಣಿಕ್ಯ ಪರೇಡ್ ಮೈದಾನದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.
ದೇಶದಾದ್ಯಂತ ಇಂದು 77 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಅದರಂತೆ ಬೆಂಗಳೂರಿನಲ್ಲಿ ಕೂಡ ಗಣರಾಜ್ಯೋತ್ಸವ ಆಚರಿಸಿದ್ದು, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಧ್ವಜಾರೋಹಣ ಮಾಡಿ ಗೌರವ ಸಲ್ಲಿಸಿದರು.
ಧ್ವಜ ರೋಹಣದ ಬಳಿಕ ತೆರೆದ ಜೀಪಿನಲ್ಲಿ ಪರೇಡ್ ಪರಿ ವೀಕ್ಷಣೆ ಮಾಡಿದ್ದು, ವಿಧಾನಸಭೆಯಲ್ಲಿ ಭಾಷಣ ವಿವಾದದ ಬಳಿಕ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಗವರ್ನರ್ ಥಾವರ್ ಚಂದ್ ಗೆಹ್ಲೋಟ್ ಮುಖಾಮುಖಿಯಾಗಿದ್ದಾರೆ.
ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗವರ್ನರ್ ಗೆ ಸಿಎಂ ಸಿದ್ದರಾಮಯ್ಯ ಕೈ ಮುಗಿದು ಸ್ವಾಗತಿಸಿದರು.

